ನನ್ನ ಅನುಭವವನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ನೀಡಲು ಬಯಸುತ್ತೇನೆ: ಸುರೇಶ್ ರೈನಾ
ಜಮ್ಮು ಮತ್ತು ಕಾಶ್ಮೀರ ಕ್ರೀಡಾ ಸಮಿತಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರು 15 ವರ್ಷಗಳ ಕಾಲ ಭಾರತ ಪರ ಆಡಿದ್ದರು ಮತ್ತು ಈಗ ಈ ಅನುಭವವನ್ನು ಜಮ್ಮು ಮತ್ತು ಕಾಶ್ಮೀರದ ಆಟಗಾರರಿಗೆ ತಿಳಿಸುತ್ತೇನೆ ಎಂದು ಹೇಳಿದರು.
Published: 25th November 2020 11:14 AM | Last Updated: 25th November 2020 11:14 AM | A+A A-

ಸುರೇಶ್ ರೈನಾ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕ್ರೀಡಾ ಸಮಿತಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರು 15 ವರ್ಷಗಳ ಕಾಲ ಭಾರತ ಪರ ಆಡಿದ್ದರು ಮತ್ತು ಈಗ ಈ ಅನುಭವವನ್ನು ಜಮ್ಮು ಮತ್ತು ಕಾಶ್ಮೀರದ ಆಟಗಾರರಿಗೆ ತಿಳಿಸುತ್ತೇನೆ ಎಂದು ಹೇಳಿದರು.
ರಾಜ್ಯದ ಯುವ ಆಟಗಾರರ ಪ್ರತಿಭೆಯನ್ನು ಉತ್ತೇಜಿಸಲು ಜಮ್ಮು ಮತ್ತು ಕಾಶ್ಮೀರ ಕ್ರೀಡಾ ಸಮಿತಿ ಮಂಗಳವಾರ ಭಾರತದ ಮಾಜಿ ಕ್ರಿಕೆಟ್ ತಂಡದ ಆಟಗಾರ ಸುರೇಶ್ ರೈನಾ ಅವರ ಸುರೇಶ್ ರೈನಾ ಕ್ರಿಕೆಟ್ ಅಕಾಡೆಮಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ಒಪ್ಪಂದದ ವೇಳೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟೆನಿಂಟ್ ಗವರ್ನರ್ ಮನೋಜ್ ಸಿನ್ಹಾ ಉಪಸ್ಥಿತರಿದ್ದರು. ಇನ್ನು ನವೆಂಬರ್ 27ರಂದು ರೈನಾ ಅವರ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.