ಮೊದಲ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ಆಸಿಸ್ ಬ್ಯಾಟಿಂಗ್ ಆಯ್ಕೆ, ಭರ್ಜರಿ ಆರಂಭ

ಐಪಿಎಲ್ ಬೆನ್ನಲ್ಲೇ ಆಸಿಸ್ ಪ್ರವಾಸ ಕೈಗೊಂಡಿರುವ ಭಾರತ ತಂಡದ ಕ್ರಿಕೆಟ್ ಅಭಿಯಾನ ಮುಂದುವರೆದಿದ್ದು, ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸಿಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ವರ್ಸಸ್ ಆಸ್ಚ್ರೇಲಿಯಾ
ಭಾರತ ವರ್ಸಸ್ ಆಸ್ಚ್ರೇಲಿಯಾ

ಸಿಡ್ನಿ: ಐಪಿಎಲ್ ಬೆನ್ನಲ್ಲೇ ಆಸಿಸ್ ಪ್ರವಾಸ ಕೈಗೊಂಡಿರುವ ಭಾರತ ತಂಡದ ಕ್ರಿಕೆಟ್ ಅಭಿಯಾನ ಮುಂದುವರೆದಿದ್ದು, ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸಿಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ  ಮೊದಲ ಏಕದಿನ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಆಸಿಸ್ ನಾಯಕ ಆ್ಯರೋನ್ ಫಿಂಚ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 

ಬ್ಯಾಟಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ  ತಂಡ ಭರ್ಜರಿ ಆರಂಭ ಪಡೆದಿದ್ದು, ಆಸಿಸ್ ಪರ ಕ್ರೀಸ್ ಗೆ ಆಗಮಿಸಿರುವ ಡೇವಿಡ್ ವಾರ್ನರ್ ಮತ್ತು ನಾಯಕ ಫಿಂಚ್ ಭರ್ಜರಿ ಆರಂಭ ನೀಡಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ 8.3 ಓವರ್ ಗೆ ಆಸಿಸ್ ಪಡೆ ವಿಕೆಟ್ ನಷ್ಟವಿಲ್ಲದೇ 5.76 ರವ್  ಸರಾಸರಿಯಲ್ಲಿ 49 ರನ್ ಗಳಿಸಿದೆ. 20 ಎಸೆತದಲ್ಲಿ 19 ರನ್ ಗಳಿಸಿರುವ ಡೇವಿಡ್ ವಾರ್ನರ್ ಮತ್ತು 32 ಎಸೆತಗಳಲ್ಲಿ 28 ರನ್ ಗಳಿಸಿರುವ ಫಿಂಚ್ ಕ್ರೀಸ್ ಕಾಯ್ದುಕೊಂಡಿದ್ದಾರೆ.

ತಂಡಗಳು ಇಂತಿವೆ
ಭಾರತ (ಪ್ಲೇಯಿಂಗ್ ಇಲೆವೆನ್ ):
ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ

ಆಸ್ಟ್ರೇಲಿಯಾ (ಪ್ಲೇಯಿಂಗ್ ಇಲೆವೆನ್ ): ಆ್ಯರೋನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್ ವೆಲ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್  ಹೇಜಲ್‌ವುಡ್
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com