ಐಪಿಎಲ್ 2020: ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ

ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್ ಸಿಬಿ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

Published: 05th October 2020 08:02 PM  |   Last Updated: 05th October 2020 08:05 PM   |  A+A-


Virat_Kohli_Shreyas1

ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್

Posted By : Nagaraja AB
Source : ANI

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್ ಸಿಬಿ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಶನಿವಾರ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಲೇಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರಿಗೆ  ಸ್ನಾಯು ಸಮಸ್ಯೆಯಿಂದಾಗಿ  ಈ ಆವೃತ್ತಿಯಿಂದ ಹೊರನಡೆದಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಮೇಲೆ ಪ್ರಮುಖ ಸಮಸ್ಯೆ ಬೀರುವ ಸಾಧ್ಯತೆಯಿದೆ.

ಆರ್ ಸಿಬಿ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಮೊಯೀನ್ ಅಲಿ ಮತ್ತು ಮೊಹಮ್ಮದ್ ಸಿರಾಜ್ ಅವರು ಆಡಮ್ ಜಂಪಾ ಮತ್ತು ಗುರ್ಕೀರತ್ ಮನ್ ಅವರು ಬದಲಿಗೆ ಆಡುತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್  ತಂಡ ಇಂತಿದೆ:  ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ ( ನಾಯಕ) ರಿಷಭ್ ಪಂತ್, ಸೀಮ್ರಾನ್ ಹೆಟ್ಮಾರ್, ಮಾರ್ಕಸ್ ಸ್ಟೊಯಿನೀಸ್, ಆರ್ ಅಶ್ವಿನ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಕಾಗಿಸೋ ರಬಾಡ, ಅನ್ ರಿಚ್ ನಾರ್ಟ್ಜೆ

ಆರ್ ಸಿಬಿ ತಂಡ ಇಂತಿದೆ: ದೇವದತ್ ಪಡಿಕ್ಕಲ್, ಆರೋನ್ ಪಿಂಚ್, ವಿರಾಟ್ ಕೊಹ್ಲಿ ( ನಾಯಕ) ಎಬಿ ಡಿವಿಲಿಯರ್ಸ್, ಮೋಯಿನ್ ಆಲಿ,  ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಐಸೂರು ಉಡಾನಾ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಹಲ್.

Stay up to date on all the latest ಕ್ರಿಕೆಟ್ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp