ಐಪಿಎಲ್ 2020: ಹೈದರಾಬಾದಾ ವಿರುದ್ಧ 5 ವಿಕೆಟ್ ಗಳಿಂದ ಗೆದ್ದು ಬೀಗಿದ ರಾಜಸ್ತಾನ

ಐಪಿಎಲ್ 13ನೇ ಆವೃತ್ತಿಯ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದುಬೈ: ಐಪಿಎಲ್ 13ನೇ ಆವೃತ್ತಿಯ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಪೇರಿಸಿತ್ತು. ಡೇವಿಡ್ ವಾರ್ನರ್ 48 ಮತ್ತು ಮನೀಷ್ ಪಾಂಡೆ 54 ರನ್ ಬಾರಿಸಿ ತಂಡ ಸ್ಪರ್ಧಾತ್ಮಕ ರನ್ ಕಲೆಹಾಕುವಲ್ಲಿ ಕಾರಣಕರ್ತರಾಗಿದ್ದರು. 

ಇನ್ನು ಹೈದರಾಬಾದ್ ನೀಡಿದ 159 ರನ್ ಗಳ ಗುರಿ ಬೆನ್ನಟ್ಟಿದ ರಾಯಲ್ಸ್ ತಂಡಕ್ಕೆ ರಿಯಾನ್ ಪರಾಗ್ ಮತ್ತು ರಾಹುಲ್ ತೇವಾಟಿಯಾ ಜೋಡಿ ಅದ್ಭುತ ಬ್ಯಾಟಿಂಗ್ ಮಾಡಿ 85 ರನ್ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com