ಕ್ರಿಸ್ ಮೋರಿಸ್ ಮರಳುವಿಕೆಯಿಂದ ಬೌಲಿಂಗ್ ವಿಭಾಗಕ್ಕೆ ಬಲ ಬಂದಿದೆ: ವಿರಾಟ್ ಕೊಹ್ಲಿ

ಕಳೆದ ಎರಡು ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್‌ ಪ್ರದರ್ಶನ ತೋರಿದ ದಕ್ಷಿಣ ಆಫ್ರಿಕಾದ ಸ್ಟಾರ್‌ ಆಲ್‌ರೌಂಡರ್‌ ಕ್ರಿಸ್‌ ಮೋರಿಸ್‌ ಅವರನ್ನು ರಾಯಲ್‌ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್‌ ಕೊಹ್ಲಿ ಶ್ಲಾಘಿಸಿದ್ದಾರೆ. ಬಲಗೈ ವೇಗಿ ಆರ್‌ಸಿಬಿ ಕೂಡಿಕೊಂಡಿದ್ದರಿಂದ ಬೌಲಿಂಗ್‌ ವಿಭಾಗದ ಬಲ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

Published: 13th October 2020 11:59 AM  |   Last Updated: 13th October 2020 11:59 AM   |  A+A-


Chris_Morris1

ಕ್ರಿಸ್ ಮೋರಿಸ್

Posted By : Nagaraja AB
Source : UNI

ಶಾರ್ಜಾ : ಕಳೆದ ಎರಡು ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್‌ ಪ್ರದರ್ಶನ ತೋರಿದ ದಕ್ಷಿಣ ಆಫ್ರಿಕಾದ ಸ್ಟಾರ್‌ ಆಲ್‌ರೌಂಡರ್‌ ಕ್ರಿಸ್‌ ಮೋರಿಸ್‌ ಅವರನ್ನು ರಾಯಲ್‌ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್‌ ಕೊಹ್ಲಿ ಶ್ಲಾಘಿಸಿದ್ದಾರೆ. ಬಲಗೈ ವೇಗಿ ಆರ್‌ಸಿಬಿ ಕೂಡಿಕೊಂಡಿದ್ದರಿಂದ ಬೌಲಿಂಗ್‌ ವಿಭಾಗದ ಬಲ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಸೋಮವಾರ ಶಾರ್ಜಾ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಹದಿಮೂರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 28ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು, ಸಂಘಟಿತ ಪ್ರದರ್ಶನದ ನೆರವಿನಿಂದ ಕೋಲ್ಕತಾ ನೈಟ್‌ ರೈಡರ್ಸ್ ತಂಡವನ್ನು 82 ರನ್‌ಗಳಿಂದ ಪರಾಭವಗೊಳಿಸಿತು. ಆಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿತು. 

ಶುಭಮನ್‌ ಗಿಲ್‌ ಬಿಟ್ಟರೆ ಇನ್ನುಳಿದ ಯಾವೊಬ್ಬ ಬ್ಯಾಟ್ಸ್‌ಮನ್‌ ಆರ್‌ಸಿಬಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸುವಲ್ಲಿ ಸಾಧ್ಯವಾಗಲಿಲ್ಲ. ಅಂತಿಮವಾಗಿ ಕೆಕೆಆರ್‌ ನಿಗದಿತ 20 ಓವರ್‌ಗಳಿಗೆ 9 ವಿಕೆಟ್‌ಗಳನ್ನು ಕಳೆದುಕೊಂಡು 112 ರನ್‌ಗಳಿಗೆ ಸೀಮಿತವಾಯಿತು. ಈ ಪಂದ್ಯದಲ್ಲೂ ಅದ್ಭುತ ಬೌಲಿಂಗ್‌ ಪ್ರದರ್ಶನ ತೋರಿದ ಕ್ರಿಸ್‌ ಮೋರಿಸ್‌ ಎರಡು ವಿಕೆಟ್‌ಗಳನ್ನು ಕಬಳಿಸಿದರು.

Stay up to date on all the latest ಕ್ರಿಕೆಟ್ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp