ರೋಹಿತ್ ಆಯ್ಕೆ ಮಾಡದ್ದಕ್ಕೆ ತೀವ್ರ ವಿರೋಧ: ನಾಳೆ ರೋ'ಹಿಟ್' ಫಿಟ್ ನೆಸ್ ಪರೀಕ್ಷೆ ನಡೆಸಲಿರುವ ಬಿಸಿಸಿಐ!

ಗಾಯದ ಸಮಸ್ಯೆಯನ್ನು ಉಲ್ಲೇಖಿಸಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರನ್ನು ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡದಿರುವುದಕ್ಕೆ ಬಿಸಿಸಿಐ ವಿರುದ್ಧ ಟೀಕೆಗಳು ಕೇಳಿಬಂದಿತ್ತು.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ದುಬೈ: ಗಾಯದ ಸಮಸ್ಯೆಯನ್ನು ಉಲ್ಲೇಖಿಸಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರನ್ನು ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡದಿರುವುದಕ್ಕೆ ಬಿಸಿಸಿಐ ವಿರುದ್ಧ ಟೀಕೆಗಳು ಕೇಳಿಬಂದಿತ್ತು.

ಬಿಸಿಸಿಐ ಆಯ್ಕೆ ಸಮಿತಿ ಬೇಕು ಅಂತೆ ರೋಹಿತ್ ಶರ್ಮಾ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡಿಲ್ಲ ಎಂದು ನೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ತಂಡದ ಆಯ್ಕೆ ಸಂಬಂಧ ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಸಿಸಿಐ ವೈದ್ಯಕೀಯ ತಂಡ ನಾಳೆ ರೋಹಿತ್ ಶರ್ಮಾರ ಫಿಟ್ ನೆಸ್ ಪರೀಕ್ಷೆಯನ್ನು ನಡೆಸಲಿದೆ. 

ಎಎನ್‌ಐಯೊಂದಿಗೆ ಮಾತನಾಡಿದ ಬಿಸಿಸಿಐ ಕಾರ್ಯಕರ್ತ, ಮುಂಬೈ ಇಂಡಿಯನ್ಸ್ ನಾಯಕನನ್ನು ಮೌಲ್ಯಮಾಪನ ಮಾಡಲಾಗುವುದು ಎಂದು ದೃಢಪಡಿಸಲಾಗುವುದು ಎಂದರು. 

"ರೋಹಿತ್‌ರನ್ನು ನಾಳೆ ಫಿಟ್ ನೆಸ್ ಪರೀಕ್ಷೆ ನಡೆಸಲಾಗುವುದು. ನಂತರ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಕಳುಹಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಮಂಡಿರಜ್ಜು ಗಾಯದ ಸಮಸ್ಯೆಯಿಂದ ರೋಹಿತ್ ಬಳಲುತ್ತಿರುವುದರಿಂದ ನಡೆಯುವುದು ಮತ್ತು ವೇಗವಾಗಿ ಓಡುವ ಪರೀಕ್ಷೆಗೆ ಒಳಪಡಿಸಲಾಗುವುದು ಎಂದರು.

ನವೆಂಬರ್ 27ರಿಂದ ಆಸ್ಟ್ರೇಲಿಯಾ ಪ್ರವಾಸ ಆರಂಭಗೊಳ್ಳಲಿದ್ದು ಈ ವೇಳೆ ರೋಹಿತ್ ಶರ್ಮಾ ಸರಣಿಯ ಭಾಗವಾಗುವುದು ಒಳ್ಳೆಯದು ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com