ರೋಹಿತ್‌ ಶರ್ಮಾ ಮುಂಬೈ ಇಂಡಿಯನ್ಸ್‌ನ ಅಪಾಯಕಾರಿ ಬ್ಯಾಟ್ಸ್‌ಮನ್‌: ರಿಕ್ಕಿ ಪಾಂಟಿಂಗ್‌

ಟೀಮ್‌ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಅಪಾಯಕಾರಿ ಬ್ಯಾಟ್ಸ್ ಮನ್ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಹಾಗೂ ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್‌ ರಿಕ್ಕಿ ಪಾಂಟಿಂಗ್‌ ಗುಣಗಾನ ಮಾಡಿದ್ದಾರೆ.
ರೋಹಿತ್ ಶರ್ಮಾ, ರಿಕ್ಕಿ ಪಾಂಟಿಂಗ್
ರೋಹಿತ್ ಶರ್ಮಾ, ರಿಕ್ಕಿ ಪಾಂಟಿಂಗ್

ನವದೆಹಲಿ: ಟೀಮ್‌ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಅಪಾಯಕಾರಿ ಬ್ಯಾಟ್ಸ್ ಮನ್ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಹಾಗೂ ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್‌ ರಿಕ್ಕಿ ಪಾಂಟಿಂಗ್‌ ಗುಣಗಾನ ಮಾಡಿದ್ದಾರೆ.

ಯುಎಇನಲ್ಲಿ ನಡೆಯಲಿರುವ ಐಪಿಎಲ್ ನಲ್ಲಿ ಯಾರು ಅತ್ಯಂತ ಹೆಚ್ಚಿನ ಅಪಾಯಕಾರಿ ಎಂಬ ಪ್ರಶ್ನೆಗೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರನ್ನು ರಿಕ್ಕಿ ಪಾಂಟಿಂಗ್ ಆಯ್ಕೆ ಮಾಡಿರುವುದಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಶೇರ್ ಮಾಡಿರುವ ಸರಣಿ ವಿಡಿಯೋದಲ್ಲಿ ತಿಳಿಸಿದೆ.

ರೋಹಿತ್ ಶರ್ಮಾ, ಈಗಾಗಲೇ ತಮ್ಮ ಅದ್ಭುತ ಬ್ಯಾಟಿಂಗ್‌ನಿಂದ ಸಾಕಷ್ಟು ದೊಡ್ಡ ಹೆಸರು ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ಸೀಮಿತ ಓವರ್‌ಗಳ ಮಾದರಿಯ ಜತೆಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿಯೂ ತಮ್ಮ ಪ್ರಾಬಲ್ಯ ವಿಸ್ತರಿಸುತ್ತಿದ್ದಾರೆ.

ಕೊರೋನಾ ವೈರಸ್‌ ಮಾರಣಾಂತಿಕ ಸೋಂಕಿನಿಂದ ಇಷ್ಟು ದಿನಗಳ ಕಾಲ ಮನೆಯಲ್ಲಿ ಸಮಯ ಕಳೆದಿದ್ದ ಬಲಗೈ ಬ್ಯಾಟ್ಸ್‌ಮನ್‌, ಇದೀಗ ಸೆ.19 ರಿಂದ ಆರಂಭವಾಗುವ ಹದಿಮೂರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ಕಳೆದ ಆವೃತ್ತಿಯ ರನ್ನರ್‌ ಅಪ್‌ ಚೆನ್ನೈ ಸೂಪರ್‌ ಕಿಂಗ್ಸ್ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. 

ರೋಹಿತ್‌ ಶರ್ಮಾ ಅವರ ಬ್ಯಾಟಿಂಗ್‌ ಕೌಶಲದ ಬಗ್ಗೆ ಸಾಕಷ್ಟು ಮಂದಿ ದಿಗ್ಗಜರು ಶ್ಲಾಘಿಸಿದ್ದಾರೆ. ಇದೀಗ ಈ ಸಾಲಿಗೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಹಾಗೂ ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್‌ ರಿಕ್ಕಿ ಪಾಂಟಿಂಗ್‌ ಸೇರಿದ್ದು, ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಕೌಶಲ್ಯವನ್ನು ಮನಸಾರೆ ಕೊಂಡಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com