ಚಾಲೆಂಜರ್ಸ್‌ ಚಾಲೆಂಜ್‌ಗೆ ರೆಡಿ ಎಂದ ಡೇವಿಡ್‌ ವಾರ್ನರ್‌!

ಇಂಗ್ಲೆಂಡ್‌ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿ ಬಳಿಕ ಇದೀಗ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆಡಲು ಮುಂದಾಗಿರುವ ಆಸ್ಟ್ರೇಲಿಯಾದ ಸ್ಟಾರ್‌ ಓಪನರ್‌ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ನಾಯಕ ಡೇವಿಡ್‌ ವಾರ್ನರ್‌, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆಡಲು ಬಹಳ ಕಾತುರದಿಂದ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.
ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿ
ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿ

ದುಬೈ: ಇಂಗ್ಲೆಂಡ್‌ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿ ಬಳಿಕ ಇದೀಗ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆಡಲು ಮುಂದಾಗಿರುವ ಆಸ್ಟ್ರೇಲಿಯಾದ ಸ್ಟಾರ್‌ ಓಪನರ್‌ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ನಾಯಕ ಡೇವಿಡ್‌ ವಾರ್ನರ್‌, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆಡಲು ಬಹಳ ಕಾತುರದಿಂದ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ಸೆಪ್ಟೆಂಬರ್‌ 21ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಆರ್‌ಸಿಬಿ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ಈ ಪಂದ್ಯದ ಬಗ್ಗೆ ವಾರ್ನರ್‌ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

"ಖಂಡಿತವಾಗಿಯೂ ಇದು ಅತ್ಯಂತ ಕಠಿಣ ಪಂದ್ಯ ಆಗಿರುತ್ತದೆ. ಅದರೆ, ನಮ್ಮ ತಂಡ ಸಕಲ ಸಿದ್ಧತೆ ಕೈಗೊಂಡಿದ್ದು ಟೂರ್ನಿಯನ್ನು ಆಡಲು ಕಾತುರದಿಂದ ಎದುರು ನೋಡುತ್ತಿದ್ದೇವೆ," ಎಂದು ಸ್ಫೋಟಕ ಎಡಗೈ ಆರಂಭಿಕ ಬ್ಯಾಟ್ಸ್‌ಮನ್‌ ಆತ್ಮವಿಶ್ವಾಸದ ಮಾತುಗಳನ್ನು ಆಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com