ಐಪಿಎಲ್ 2020: ಸನ್ ರೈಸರ್ಸ್ ಹೈದ್ರಾಬಾದ್ ಗೆ 164 ರನ್ ಗುರಿ ನೀಡಿದ ಆರ್ ಸಿಬಿ

ಇಲ್ಲಿನ  ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2020  ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿದೆ.

Published: 21st September 2020 09:50 PM  |   Last Updated: 21st September 2020 09:58 PM   |  A+A-


RCB_Player1

ಆರ್ ಸಿಬಿ ತಂಡದ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್, ದೇವದತ್ತ

Posted By : Nagaraja AB
Source : Online Desk

ದುಬೈ: ಇಲ್ಲಿನ  ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2020  ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಕನ್ನಡಿಗ ದೇವದತ್ತ ಪಡಿಕ್ಕಲ್ ಹಾಗೂ ಆ್ಯರನ್ ಪಿಂಚ್ ಅವರ ಜೊತೆಯಾಟದಿಂದ ಮೊದಲ ವಿಕೆಟ್ ಗೆ 90 ರನ್ ಗಳಿಸಿತು. ಪಡಿಕ್ಕಲ್ 8 ಬೌಂಡರಿ ಗಳೊಂದಿಗೆ ಆಕರ್ಷಕ 56 ರನ್ ಗಳಿಸಿದರು. ಇವರಿಬ್ಬರೂ ಔಟಾದ ಬಳಿಕ ಕ್ರೀಸ್ ಗೆ ಬಂದ ನಾಯಕ ವಿರಾಟ್ ಕೊಹ್ಲಿ ಕೇವಲ 14 ರನ್ ಗಳಿಗೆ ವಿಕೆಟ್ ಒಪ್ಪಿಸಿದರು.ಕೊನೆಯಲ್ಲಿ ಅಬ್ಬರದ ಆಟವಾಡಿದ ಎಬಿ ಡಿವಿಲಿಯರ್ಸ್ 4 ಬೌಂಡರಿ ಮತ್ತು 2 ಸಿಕ್ಸರ್ ಮೂಲಕ 51 ರನ್ ಗಳಿಸಿದರು.

ಸನ್ ರೈಸರ್ಸ್ ಹೈದ್ರಾಬಾದ್ ಪರ ಭುವನೇಶ್ವರ್ ಕುಮಾರ್, ಟಿ. ನಟರಾಜನ್, ವಿಜಯ ಶಂಕರ್ ಹಾಗೂ ಅಭಿಷೇಕ್ ಶರ್ಮಾ ತಲಾ ಒಂದೂಂದು ವಿಕೆಟ್ ಪಡೆದರು.

Stay up to date on all the latest ಕ್ರಿಕೆಟ್ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp