ಐಪಿಎಲ್ 2021ರ ಉದ್ಘಾಟನಾ ಪಂದ್ಯ: ಮುಂಬೈ ಮಣಿಸಿದ ಬೆಂಗಳೂರಿಗೆ 2 ವಿಕೆಟ್ ಜಯ!

2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ)   ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ ಜಯ ಗಳಿಸಿದೆ.
ಎಬಿಡಿ
ಎಬಿಡಿ
Updated on: 

ಚೆನ್ನೈ: 2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ)   ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ ಜಯ ಗಳಿಸಿದೆ.

ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಕಾರಣ ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತ್ತು.

ಮುಂಬೈ ಪರ ಕ್ರಿಸ್ ಲಿನ್ (49), ಸೂರ್ಯಕುಮಾರ್ ಯಾದವ್ (31), ಇಶಾನ್ ಕಿಶನ್ (29) ಉತ್ತಮ ಮೊತ್ತ ಕಲೆ ಹಾಕಿದ್ದರು. ಆರ್ಸಿಬಿ ಪರ ಹರ್ಷಲ್ ಪಟೇಲ್ 5 ವಿಕೆಟ್ ಪಡೆದು ಮಿಂಚಿದರೆ ವಾಷಿಂಗ್ಟನ್ ಸುಂದರ್, ಕೈಲ್ ತಲಾ ಒಂದು ವಿಕೆಟ್ ಪಡೆದರು.

ಮುಂಬೈನಿಂದ 160 ರನ್ ಗುರಿ ಪಡೆದ ಬೆಂಗಳೂರು ಪರ ಜಿಜೆ ಮ್ಯಾಕ್ಸ್ ವೆಲ್ (39), ಎಬಿಡಿ (43), ನಾಯಕ ಕೊಹ್ಲಿ (33) ಉತ್ತಮ ಪ್ರದರ್ಶನ ನೀಡಿದ್ದರು. ಬೆಂಗಳೂರು ನಿಗದಿತ ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿದೆ.

ಮುಂಬೈ ಪರ ಜಸ್ ಪ್ರೀತ್ ಬುಮ್ರಾ, ಜನ್ಸೆನ್ ತಲಾ ಎರಡು ವಿಕೆಟ್, ಬೋಲ್ಟ್, ಕುನಾಲ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.

ಐಪಿಎಲ್ ನಾಳಿನ ಪಂದ್ಯದಲ್ಲಿ ಚೆನ್ನೈ ಸೂಪ ಕಿಂಗ್ಸ್ ಹಾಗೂ ಡೆಲ್ಲಿ ಮುಖಾಮುಖಿಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com