1079 ದಿನಗಳ ಬಳಿಕ ಐಪಿಎಲ್‌ನಲ್ಲಿ ಮ್ಯಾಕ್ಸ್ ವೆಲ್ ಮೊದಲ ಸಿಕ್ಸ್; 100 ಮೀಟರ್ ದೂರದ ಸಿಕ್ಸರ್ ಕಂಡು ದಂಗಾದ ಕೊಹ್ಲಿ, ವಿಡಿಯೋ!
ಚೆನ್ನೈ: 2021ರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ ಮುಂಬೈ ಇಂಡಿಯನ್ಸ್ ವಿರುದ್ಧ ಎರಡು ಸಿಕ್ಸರ್ ಬಾರಿಸಿದ್ದು ಖಂಡಿತವಾಗಿಯೂ ಉತ್ತಮ ಅನುಭವ ಕೊಟ್ಟಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಹೇಳಿದ್ದಾರೆ.
ಕಳೆದ ವರ್ಷ ನಡೆದ ಐಪಿಎಲ್ 13ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್(ಈಗಿನ ಪಂಜಾಬ್ ಕಿಂಗ್ಸ್) ಪರ ಆಡಿದ್ದ ಗ್ಲೆನ್ ಮ್ಯಾಕ್ಸ್ ವೆಲ್ ರನ್ ಕಲೆ ಹಾಕಲು ತಿಣುಕಾಡಿದ್ದರು. ಈ ಟೂರ್ನಿಯಲ್ಲಿ ಅವರು ಗಳಿಸಿದ್ದು ಕೇವಲ 100 ರನ್ ಮಾತ್ರ. ನಿಶ್ಚಿತ ಸಮಯದಲ್ಲಿ ಬಲಗೈ ಬ್ಯಾಟ್ಸ್‌ಮನ್ ತಂಡಕ್ಕೆ ಒಂದು ಸಿಕ್ಸರ್ ಹೊಡೆಯಲು ಸಾಧ್ಯವಾಗಲಿಲ್ಲ.
ಆದರೆ ಐಪಿಎಲ್ 2021ರ ಉದ್ಘಾಟನ ಪಂದ್ಯದಲ್ಲಿ ಆರ್ ಸಿಬಿ ಪರ ಆಡಿದ್ದ ಗ್ಲೆನ್ ಮ್ಯಾಕ್ಸ್ ವೆಲ್ ಎರಡು ಸಿಕ್ಸರ್‌ಗಳು ಸೇರಿದಂತೆ 39 ರನ್ ಗಳಿಸಿ ತಮ್ಮ ಭವಿಷ್ಯವನ್ನು ಬದಲಾಯಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ರೋಚಕ ಮುಖಾಮುಖಿಯಲ್ಲಿ ಆರ್‌ಸಿಬಿ ಮುಂಬೈ ಇಂಡಿಯನ್ಸ್ ತಂಡವನ್ನು ಎರಡು ವಿಕೆಟ್‌ಗಳಿಂದ ಸೋಲಿಸಿತು.
ಇನ್ನೊಂದು ಬದಿಯಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಆಡುತ್ತಿದ್ದು ನಾನು ಉತ್ತಮವಾಗಿ ಆಡಲು ಸಾಧ್ಯವಾಯಿತು ಎಂದು ಮ್ಯಾಕ್ಸ್‌ವೆಲ್ ಹರ್ಷಲ್ ಪಟೇಲ್‌ಗೆ ಐಪಿಎಲ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ತಿಳಿಸಿದ್ದಾರೆ.
ಮೊದಲ ಬ್ಯಾಟಿಂಗ್ ಮಾಡಿದ್ದ ಮುಂಬೈ ತಂಡವನ್ನು 159 ರನ್ ಗಳಿಗೆ ಕಟ್ಟಿ ಹಾಕಲು ಸಾಧ್ಯವಾಯಿತು. 160 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿಬಿ ತಂಡ ಕೊನೆಯ ಎಸೆತದಲ್ಲಿ 1 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು.
ಮುಂಬೈ ಪರ ಕ್ರಿಸ್ ಲಿನ್ (49), ಸೂರ್ಯಕುಮಾರ್ ಯಾದವ್ (31), ಇಶಾನ್ ಕಿಶನ್ (29) ಉತ್ತಮ ಮೊತ್ತ ಕಲೆ ಹಾಕಿದ್ದರು. ಆರ್ಸಿಬಿ ಪರ ಹರ್ಷಲ್ ಪಟೇಲ್ 5 ವಿಕೆಟ್ ಪಡೆದು ಮಿಂಚಿದರೆ ವಾಷಿಂಗ್ಟನ್ ಸುಂದರ್, ಕೈಲ್ ತಲಾ ಒಂದು ವಿಕೆಟ್ ಪಡೆದರು.
ಮುಂಬೈನಿಂದ 160 ರನ್ ಗುರಿ ಪಡೆದ ಬೆಂಗಳೂರು ಪರ ಜಿಜೆ ಮ್ಯಾಕ್ಸ್ ವೆಲ್ (39), ಎಬಿಡಿ (43), ನಾಯಕ ಕೊಹ್ಲಿ (33) ಉತ್ತಮ ಪ್ರದರ್ಶನ ನೀಡಿದ್ದರು. ಬೆಂಗಳೂರು ನಿಗದಿತ ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ