
ಮುಂಬೈ: ಟೀಂ ಇಂಡಿಯಾದ ಹಿರಿಯ ವೇಗಿ ಭುವನೇಶ್ವರ್ ಕುಮಾರ್ ಐಸಿಸಿ ತಿಂಗಳ ಶ್ರೇಷ್ಠ ಆಟಗಾರ ಗೌರವಕ್ಕೆ ಪಾತ್ರರಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯಲ್ಲಿ ಭುವನೇಶ್ವರ್ ಕುಮಾರ್ ಗಮನಾರ್ಹ ಪ್ರದರ್ಶನ ನೀಡಿದ್ದು ಈ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳ ಗೌರವಕ್ಕೆ ಪಾತ್ರರಾಗಿದ್ದಾರೆ.
ಭುವನೇಶ್ವರ್ ಜೊತೆಗೆ ಆಫ್ಘಾನಿಸ್ತಾನದ ರಶೀದ್ ಖಾನ್ ಮತ್ತು ಜಿಂಬಾಬ್ವೆ ತಂಡದ ಸೀನ್ ವಿಲಿಯಮ್ಸ್ ನಾಮಿನೇಟ್ ಆಗಿದ್ದರು.
ಜನವರಿ ತಿಂಗಳ ಗೌರವಕ್ಕೆ ರಿಷಬ್ ಪಂತ್, ಫೆಬ್ರವರಿ ತಿಂಗಳಲ್ಲಿ ರವಿಚಂದ್ರನ್ ಅಶ್ವಿನ್ ಆಯ್ಕೆಯಾಗಿದ್ದು ಇದೀಗ ಭುವನೇಶ್ವರ್ ಕುಮಾರ್ ಆಯ್ಕೆಯಾಗಿದ್ದಾರೆ.
Advertisement