ತಾನು ಎಡವಿದರೂ, ಮ್ಯಾಕ್ಸ್‌ವೆಲ್‌, ಎಬಿಡಿ ಸಿಡಿಲಬ್ಬರದ ಬ್ಯಾಟಿಂಗ್ ಕೊಹ್ಲಿ ಪ್ರೋತ್ಸಾಹ, ವಿಡಿಯೋ ವೈರಲ್!

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 5 ರನ್ ಗಳಿಗೆ ಔಟ್ ಆಗಿ ನಿರಾಶೆ ಮೂಡಿಸಿದ್ದರು. ಆರಂಭಿಕ ಆಘಾತಕ್ಕೆ ಸಿಲುಕಿದ್ದ ಆರ್ ಸಿಬಿ ತಂಡಕ್ಕೆ ಆಸರೆಯಾಗಿದ್ದು ಮ್ಯಾಕ್ಸ್‌ವೆಲ್‌ ಮತ್ತು ಎಬಿ ಡಿವಿಲಿಯರ್ಸ್. 
ಕೊಹ್ಲಿ
ಕೊಹ್ಲಿ
Updated on: 

ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 5 ರನ್ ಗಳಿಗೆ ಔಟ್ ಆಗಿ ನಿರಾಶೆ ಮೂಡಿಸಿದ್ದರು. ಆರಂಭಿಕ ಆಘಾತಕ್ಕೆ ಸಿಲುಕಿದ್ದ ಆರ್ ಸಿಬಿ ತಂಡಕ್ಕೆ ಆಸರೆಯಾಗಿದ್ದು ಮ್ಯಾಕ್ಸ್‌ವೆಲ್‌ ಮತ್ತು ಎಬಿ ಡಿವಿಲಿಯರ್ಸ್. 

ಕೆಕೆಆರ್ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಗ್ಲೇನ್ ಮ್ಯಾಕ್ಸ್ ವೆಲ್ 49 ಎಸೆತಗಳಲ್ಲಿ 3 ಸಿಕ್ಸ್, 9 ಬೌಂಡರಿ ಸೇರಿದಂತೆ 78 ರನ್ ಬಾರಿಸಿದ್ದರು. ಇದೇ ವೇಳೆ ಎಬಿ ಡಿವಿಲಿಯರ್ಸ್ 34 ಎಸೆತಗಳಲ್ಲಿ 3 ಸಿಕ್ಸರ್, 9 ಬೌಂಡರಿ ಸೇರಿದಂತೆ ಅಜೇಯ 76 ರನ್ ಬಾರಿಸಿದ್ದರು. 

ಇದರಿಂದಾಗಿ ಆರ್ ಸಿಬಿ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಬೃಹತ್ ಮೊತ್ತ ಕಲೆ ಹಾಕಿತ್ತು. 205 ರನ್ ಗಳ ಗುರಿ ಬೆನ್ನಟ್ಟಿದ ಕೆಕೆಆರ್ ತಂಡ 166 ರನ್ ಪೇರಿಸಿ 38 ರನ್ ಗಳಿಂದ ಆರ್ ಸಿಬಿಗೆ ಶರಣಾಯಿತು. 

ಇನ್ನು ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ಗ್ಲೇನ್ ಮ್ಯಾಕ್ಸ್ ವೆಲ್ 50 ರನ್ ಬಾರಿಸುತ್ತಿದ್ದಂತೆ ಕೊಹ್ಲಿ ಹುರಿದುಂಬಿಸಿದ್ದು ಆ ವಿಡಿಯೋ ಇದೀಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. 

ಟೂರ್ನಿಯಲ್ಲಿ ಮೂರು ಪಂದ್ಯಗಳನ್ನಾಡಿರುವ ಆರ್ ಸಿಬಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com