ಇಂಗ್ಲೆಂಡ್ ಕ್ರಿಕೆಟ್ ತಂಡದ ಏಳು ಸದಸ್ಯರಿಗೆ ಕೋವಿಡ್ ಪಾಸಿಟಿವ್
ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಏಳು ಸದಸ್ಯರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ವಿಷಯವನ್ನು ತಿಳಿಸಿದೆ.
ಆದಾಗ್ಯೂ, ಪಾಕಿಸ್ತಾನ ವಿರುದ್ಧದ ಏಕದಿನ ಕ್ರಿಕೆಟ್ ಹಾಗೂ ಟಿ-20 ಸರಣಿಗಳು ನಿಗದಿಯಂತೆ ನಡೆಯಲಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಸ್ಪಷ್ಪಪಡಿಸಿದೆ. ಕಾರ್ಡಿಫ್ ನಲ್ಲಿ ಜುಲೈ 8 ರಂದು ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.
ಬ್ರಿಸ್ಟಲ್ ನಲ್ಲಿ ನಿನ್ನೆ ನಡೆಸಿದ ಆರ್ ಟಿ ಪಿಸಿಆರ್ ಪರೀಕ್ಷೆಯಲ್ಲಿ ಮೂವರು ಆಟಗಾರರು ಹಾಗೂ ನಾಲ್ವರು ಮ್ಯಾನೇಜ್ ಮೆಂಟ್ ಟೀಮ್ ಸದಸ್ಯರಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಹೇಳಿಕೆ ಬಿಡುಗಡೆ ಮಾಡಿದೆ.
ಪಬ್ಲಿಕ್ ಹೆಲ್ತ್ ಇಂಗ್ಲೆಂಡ್ ಸಹಭಾಗಿತ್ವದೊಂದಿಗೆ ಪಾಸಿಟಿವ್ ದೃಢಪಟ್ಟಿರುವ ಸದಸ್ಯರಿಗೆ ಯುಕೆ ಸರ್ಕಾರದ ನಿಯಮಗಳ ಪ್ರಕಾರ ಜುಲೈ 4 ರಿಂದ ಕ್ವಾರಂಟೈನ್ ನಲ್ಲಿ ಇಡಲಾಗುತ್ತದೆ. ಉಳಿದ ಸದಸ್ಯರೂ ಐಸೋಲೇಷನ್ ನಲ್ಲಿ ಇರಲಿದ್ದಾರೆ ಎಂದು ಬೋರ್ಡ್ ಮಾಹಿತಿ ನೀಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ