ನ್ಯೂಜಿಲೆಂಡ್ ವಿರುದ್ಧ ಡಬ್ಲ್ಯುಟಿಸಿ ಫೈನಲ್ ಗೆ ಟೀಂ ಇಂಡಿಯಾ ತಂಡ ಪ್ರಕಟ

ಶುಕ್ರವಾರದಿಂದ ಸೌತಾಂಪ್ಟನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ಗಾಗಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ

ನವದೆಹಲಿ: ಶುಕ್ರವಾರದಿಂದ ಸೌತಾಂಪ್ಟನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ಗಾಗಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ.

ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭ್‌ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ

ಹನುಮಾ ವಿಹಾರಿ, ವೃದ್ಧಿಮಾನ್ ಸಹಾ, ಮೊಹಮ್ಮದ್ ಸಿರಾಜ್ ಮತ್ತು ಉಮೇಶ್ ಯಾದವ್ ಅವರು 15 ಸದಸ್ಯರ ತಂಡದಲ್ಲಿ ನಾಲ್ವರು ಸದಸ್ಯರಾಗಿದ್ದು ಕ್ರೀಸ್ ನಲ್ಲಾಡುವ ಹನ್ನೊಂದು ಮಂದಿಯಿಂದ ಹೊರಗುಳಿದಿದ್ದಾರೆ.

ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಇಬ್ಬರು ಸ್ಪಿನ್ನರ್‌ಗಳಾಗಲಿದ್ದು, ಮೂರು ಜನರ ವೇಗದ ಬೌಲರ್ ಗಳಲ್ಲಿ ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ಇದ್ದಾರೆ.

ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಇನ್ನಿಂಗ್ಸ್ ಪ್ರಾರಂಭಿಸಲಿದ್ದು  ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ಮತ್ತು ರಿಷಭ್ ಪಂತ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.

ಶುಕ್ರವಾರ ಸೌತಾಂಪ್ಟನ್‌ನ ಏಗಾಸ್ ಬೌಲ್ ಕ್ರೀಡಾಂಗಣದಲ್ಲಿ ಫೈನಲ್ ಹಣಾಹಣಿ ಪ್ರಾರಂಭವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com