ಏಕದಿನ ಶ್ರೇಯಾಂಕ: ನ್ಯೂಜಿಲೆಂಡ್ ಗೆ ಅಗ್ರಸ್ಥಾನ, 3ನೇ ಸ್ಥಾನದಲ್ಲಿ ಟೀಂ ಇಂಡಿಯಾ

ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲಿ ಬಾಂಗ್ಲಾದೇಶವನ್ನು 3–0ಸರಣಿಯಿಂದ ಸೋಲಿಸಿದ ನಂತರ ನ್ಯೂಜಿಲೆಂಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ) ಏಕದಿನ ಶ್ರೇಯಾಂಕದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದು, ವಿಶ್ವ ಚಾಂಪಿಯನ್ ಇಂಗ್ಲೆಂಡ್ ನಾಲ್ಕನೇ ಸ್ಥಾನದಲ್ಲಿದೆ.
ನ್ಯೂಜಿಲ್ಯಾಂಡ್
ನ್ಯೂಜಿಲ್ಯಾಂಡ್
Updated on

ನವದೆಹಲಿ: ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲಿ ಬಾಂಗ್ಲಾದೇಶವನ್ನು 3–0ಸರಣಿಯಿಂದ ಸೋಲಿಸಿದ ನಂತರ ನ್ಯೂಜಿಲೆಂಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ) ಏಕದಿನ ಶ್ರೇಯಾಂಕದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದು, ವಿಶ್ವ ಚಾಂಪಿಯನ್ ಇಂಗ್ಲೆಂಡ್ ನಾಲ್ಕನೇ ಸ್ಥಾನದಲ್ಲಿದೆ.

2020-21ರ ಋತುವಿನಲ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ 121 ಅಂಕಗಳನ್ನು ಗಳಿಸಿ ಎರಡು ಸ್ಥಾನಗಳ ಜಿಗಿತದೊಂದಿಗೆ ಪ್ರಥಮ ಸ್ಥಾನವನ್ನು ಗಳಿಸಿತು. ಈ ಮೊದಲು ತಂಡ ಮೂರನೇ ಸ್ಥಾನದಲ್ಲಿತ್ತು. ಟಿ 20 ಶ್ರೇಯಾಂಕದಲ್ಲಿ ನ್ಯೂಜಿಲೆಂಡ್ ಕೂಡ ಲಾಭ ಪಡೆದಿದ್ದು, ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಜಿಗಿದಿದೆ. ಆದರೂ ಇಂಗ್ಲೆಂಡ್ ಈ ಸ್ವರೂಪದಲ್ಲಿ ಅಗ್ರ ಸ್ಥಾನ ಉಳಿಸಿಕೊಂಡಿದೆ. 

118 ಅಂಕ ಸಂಪಾದಿಸುವ ಮೂಲಕ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದ್ದರೆ 115 ಅಂಕಗಳನ್ನು ಪಡೆಯುವ ಮೂಲಕ ಟೀಂ ಇಂಡಿಯಾ ಮೂರನೇ ಸ್ಥಾನದಲ್ಲಿದೆ. 

ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ, ಹಿರಿಯ ನ್ಯೂಜಿಲೆಂಡ್ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಪ್ರಥಮ ಸ್ಥಾನದಲ್ಲಿದ್ದಾರೆ. ಇನ್ನು 690 ಅಂಕಗಳನ್ನು ಪಡೆದಿರುವ ಟೀಂ ಇಂಡಿಯಾದ ಯುವ ವೇಗಿ ಜಸ್ ಪ್ರೀತ್ ಬುಮ್ರಾ ನಾಲ್ಕನೇ ಸ್ಥಾನದಲ್ಲಿದ್ದಾರೆ. 

ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಪಾಕಿಸ್ತಾನದ ಬಾಬರ್ ಅಜಂ 865 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ 857 ಅಂಕಗಳೊಂದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com