ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಫೈನಲ್, ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ರವೀಂದ್ರ ಜಡೇಜಾ ವಾಪಸ್, ಮೂವರು ಕನ್ನಡಿಗರಿಗೆ ಸ್ಥಾನ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಫೈನಲ್ ಮತ್ತು ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡ ಘೋಷಣೆ ಮಾಡಿದ್ದು, ಮೂವರು ಕನ್ನಡಿಗರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟೀಂ ಇಂಡಿಯಾ
ಟೀಂ ಇಂಡಿಯಾ

ನವದೆಹಲಿ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಫೈನಲ್ ಮತ್ತು ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡ ಘೋಷಣೆ ಮಾಡಿದ್ದು, ಮೂವರು ಕನ್ನಡಿಗರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಉದ್ಘಾಟನಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಬಿಸಿಸಿಐ ಆಯ್ಕೆ ಸಮಿತಿ ಭಾರತೀಯ ತಂಡವನ್ನು ಆಯ್ಕೆ ಮಾಡಿದೆ. ಜೂನ್ 18 ರಿಂದ ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ  ಆಡಬೇಕಿದೆ. ಈ ಪಂದ್ಯ ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ನಡೆಯಲಿದ್ದು, ಈ ಏಕೈಕ ಟೆಸ್ಟ್​ಗೆ ಭಾರತದ ಜಂಬೊ ಸ್ಕ್ವಾಡ್ ಆಯ್ಕೆಯಾಗಿದೆ.

ಬಿಸಿಸಿಐನ ಹಿರಿಯ ಆಯ್ಕೆ ಸಮಿತಿ 20 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದರೆ, 4 ಆಟಗಾರರನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಲಾಗಿದೆ. ಯಾವುದೇ ಹೊಸ ಮುಖಗಳು ತಂಡದಲ್ಲಿ ಸ್ಥಾನ ಪಡೆದಿಲ್ಲ. ಇದರ ನಡುವೆಯೇ ಅಚ್ಚರಿ ಎಂಬಂತೆ ಹಿರಿಯ ಅಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್  ಅವರಿಗೆ ತಂಡದಿಂದ ಕೊಕ್ ನೀಡಲಾಗಿದೆ. ಅದೇ ಸಮಯದಲ್ಲಿ, ಉತ್ತಮ ಫಾರ್ಮ್‌ನಲ್ಲಿರುವ ಯುವ ಓಪನರ್ ಪೃಥ್ವಿ ಶಾ ಕೂಡ ಈ ಪ್ರವಾಸಕ್ಕೆ ಆಯ್ಕೆಯಾಗಿಲ್ಲ. 

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಜೂನ್ 18 ರಿಂದ ಸೌತಾಂಪ್ಟನ್‌ನಲ್ಲಿ ನಡೆಯಲಿದೆ. ಭಾರತೀಯ ಸೆಲೆಕ್ಟರ್‌ಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಸರಣಿಗೆ ತಂಡವನ್ನು ಆಯ್ಕೆ ಮಾಡಿದ್ದಾರೆ. ಜೂನ್ 22 ರಂದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್  ಪಂದ್ಯ ಮುಗಿದ ನಂತರವೂ ಟೀಮ್ ಇಂಡಿಯಾ ಇಂಗ್ಲೆಂಡ್‌ನಲ್ಲಿ ಉಳಿಯಲಿದೆ. ಮತ್ತು, ಅಲ್ಲಿ ಅಭ್ಯಾಸ ಪಂದ್ಯಗಳನ್ನು ಆಡುತ್ತದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಟೆಸ್ಟ್ ಸರಣಿ ಆಗಸ್ಟ್ 4 ರಿಂದ ಪ್ರಾರಂಭವಾಗಲಿದೆ. ಭಾರತ ತಂಡವು ಈ ತಿಂಗಳ ಕೊನೆಯಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ಇಂಗ್ಲೆಂಡ್‌ಗೆ  ತೆರಳಲಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್  ಹಾಗೂ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾದ ತಂಡ ಇಂತಿದೆ
ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಕ್ಯಾಪ್ಟನ್), ಅಜಿಂಕ್ಯ ರಹಾನೆ (ಉಪನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರಿತ್ ಬುಮ್ರಾ, ಇಶಾಂತ್  ಶರ್ಮಾ, ಮೊಹಮ್ಮದ್ ಶಮಿ, ಮಹಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್.ರಾಹುಲ್ (ಫಿಟ್‌ನೆಸ್ ಕ್ಲಿಯರೆನ್ಸ್‌ಗೆ ಒಳಪಟ್ಟಿರುತ್ತದೆ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್; ಫಿಟ್‌ನೆಸ್ ಕ್ಲಿಯರೆನ್ಸ್‌ಗೆ ಒಳಪಟ್ಟಿರುತ್ತದೆ).

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com