ಐಪಿಎಲ್ ಗಾಗಿ ಟೆಸ್ಟ್ ಸರಣಿ ಬೇಗ ಮುಗಿಸುವಂತೆ ಬಿಸಿಸಿಐ ವಿನಂತಿಸಿಲ್ಲ: ಇಸಿಬಿ

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2021ರ ಆವೃತ್ತಿ ನಡೆಸಲು ಅನುವು ಆಗುವಂತೆ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿ ಮುಂಚಿತವಾಗಿ ನಡೆಸುವಂತೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಬೋರ್ಡ್(ಇಸಿಬಿ)ಗೆ ಬಿಸಿಸಿಐ ವಿನಂತಿಸಿಲ್ಲ ಎಂದು ಇಸಿಬಿ ಸ್ಪಷ್ಟಪಡಿಸಿವೆ.
ಟೀಂ ಇಂಡಿಯಾ
ಟೀಂ ಇಂಡಿಯಾ
Updated on

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2021ರ ಆವೃತ್ತಿ ನಡೆಸಲು ಅನುವು ಆಗುವಂತೆ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿ ಮುಂಚಿತವಾಗಿ ನಡೆಸುವಂತೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಬೋರ್ಡ್(ಇಸಿಬಿ) ಗೆ ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ವಿನಂತಿಸಿಲ್ಲ ಎಂದು ಇಸಿಬಿ ಸ್ಪಷ್ಟ ಪಡಿಸಿವೆ.

ಇಸಿಬಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಬಿಸಿಸಿಐ ಹಾಗೂ ಅಧಿಕಾರಿಗಳು ಯಾವುದೇ ಮನವಿ ಸಲ್ಲಿಸಿಲ್ಲ ಎಂದು ತಿಳಿಸಿದೆ.

“ನಾವು ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಬಿಸಿಸಿಐ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಈ ವೇಳೆ ಕೋವಿಡ್-19 ಸವಾಲುಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಆದರೆ, ಟೆಸ್ಟ್ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸುವಂತೆ ಅಧಿಕಾರಿಗಳು ಮನವಿ ಮಾಡಿಲ್ಲ. ನಿಯೋಜಿತ ಸರಣಿ ನಿಗದಿ ಪಡಿಸಿದ ವೇಳಾಪಟ್ಟಿಯಂತೆ ನಡೆಯುತ್ತದೆ” ಎಂದು ಹೇಳಿದ್ದಾರೆ.

ಟೀಮ್ ಇಂಡಿಯಾ ಆಗಸ್ಟ್ ನಲ್ಲಿ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಸರಣಿ ಆಗಸ್ಟ್ 4 ರಿಂದ ಸೆಪ್ಟಂಬರ್ 14ರ ವರೆಗೆ ನಡೆಯಲಿದೆ. ಮೂಲಗಳ ಪ್ರಕಾರ ಬಿಸಿಸಿಐ ಈ ಸರಣಿಯನ್ನು ಒಂದು ವಾರ ಮುಂಚಿತವಾಗಿ ಮುಗಿಸಲು ಬೇಡಿಕೆ ಇಟ್ಟಿದೆ ಎಂದು ತಿಳಿದು ಬಂದಿದೆ. ಇದರಿಂದ ಐಪಿಎಲ್ ಆಯೋಜನೆಗೆ ಸಹಾಯಕವಾಗಲಿದೆ ಎಂಬ ಲೆಕ್ಕಾಚಾರ.

ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳಿಂದಾಗಿ ಬಿಸಿಸಿಐ 14ನೇ ಆವೃತ್ತಿಯ ಐಪಿಎಲ್ ನ್ನು ಅರ್ಧಕ್ಕೆ ನಿಲ್ಲಿಸಿತ್ತು. ಅಕ್ಟೋಬರ್ ಹಾಗೂ ನವೆಂಬರ್ ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಗೂ ಮುನ್ನವೇ ಈ ಪಂದ್ಯಗಳನ್ನು ಮುಕ್ತಾಯಗೊಳಿಸಲು ಬಿಸಿಸಿಐ ಪ್ಲಾನ್ ಮಾಡಿಕೊಂಡಿದೆ. ಇದರ ಅನ್ವಯ ಭಾರತ-ಇಂಗ್ಲೆಂಡ್ ಸರಣಿ ಸೆಪ್ಟಂಬರ್ 10ರ ಒಳಗೆ ಮುಗಿಯುವುದು ಅವಶ್ಯಕವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com