ಟಿ-20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ!

ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ನಡುವೆ ದ್ವಿತೀಯ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ದಾಖಲೆಯೊಂದನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶುಕ್ರವಾರ ಸರಿಗಟ್ಟಿದ್ದಾರೆ.
ರೋಹಿತ್ ಶರ್ಮಾ, ಕೆ.ಎಲ್. ರಾಹುಲ್
ರೋಹಿತ್ ಶರ್ಮಾ, ಕೆ.ಎಲ್. ರಾಹುಲ್
Updated on

ರಾಂಚಿ: ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ದಾಖಲೆಯೊಂದನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶುಕ್ರವಾರ ಸರಿಗಟ್ಟಿದ್ದಾರೆ.

ಕಿವೀಸ್ ವಿರುದ್ಧ ಭಾರತ 7 ವಿಕೆಟ್ ಗಳ ನಂತರ ಗೆಲುವು ಸಾಧಿಸಿದ ನಂತರ ಟಿ-20 ಮಾದರಿಯಲ್ಲಿ ಅತಿ ಹೆಚ್ಚು ಅರ್ಧ ಶತಕ  ಗಳಿಸಿದವರಲ್ಲಿ  ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ರೋಹಿತ್ ಶರ್ಮಾ ಸರಿಗಟ್ಟಿದ್ದಾರೆ. 

ರೋಹಿತ್ ಶರ್ಮಾ 29 ಅರ್ಧ ಶತಕ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ಅಷ್ಟೇ  ಅರ್ಧಶತಕ ಗಳಿಸಿದ್ದಾರೆ. ಇನ್ನೂ ಬಾಬರ್ ಅಜಮ್ 25 ಮತ್ತು ಡೇವಿಡ್ ವಾರ್ನರ್ 22 ಅರ್ಧಶತಕ ಗಳಿಸಿದ್ದಾರೆ. ರೋಹಿತ್ ಶರ್ಮಾ ನಾಲ್ಕು ಶತಕ ಗಳಿಸಿದರೆ, ಬಾಬರ್ ಅಜಮ್ 1 ಮತ್ತು ಡೇವಿಡ್ ವಾರ್ನರ್ 1 ಶತಕ ಗಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com