ನನ್ನ ಕೊನೆಯ ಟಿ20 ಪಂದ್ಯವನ್ನು ಚೆನ್ನೈನಲ್ಲಿ ಆಡುವ ಭರವಸೆ ಇದೆ: ಎಂಎಸ್ ಧೋನಿ

ಮಹೇಂದ್ರ ಸಿಂಗ್ ಧೋನಿ(ಎಂಎಸ್ ಧೋನಿ) ಐಪಿಎಲ್‌ನಲ್ಲಿ ನಿವೃತ್ತಿಯ ಬಗ್ಗೆ ದೊಡ್ಡ ಘೋಷಣೆ ಮಾಡಿದ್ದಾರೆ. ಧೋನಿ ಅವರು ತಮ್ಮ ವೃತ್ತಿಜೀವನದಲ್ಲಿ ಯಾವಾಗಲೂ ಯೋಜನೆಗಳನ್ನು ರೂಪಿಸುವ ಮೂಲಕ ಕ್ರಿಕೆಟ್ ಆಡುತ್ತಾರೆ ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿದರು.
ಎಂಎಸ್ ಧೋನಿ
ಎಂಎಸ್ ಧೋನಿ
Updated on

ಚೆನ್ನೈ: ಮಹೇಂದ್ರ ಸಿಂಗ್ ಧೋನಿ(ಎಂಎಸ್ ಧೋನಿ) ಐಪಿಎಲ್‌ನಲ್ಲಿ ನಿವೃತ್ತಿಯ ಬಗ್ಗೆ ದೊಡ್ಡ ಘೋಷಣೆ ಮಾಡಿದ್ದಾರೆ.

ಧೋನಿ ಅವರು ತಮ್ಮ ವೃತ್ತಿಜೀವನದಲ್ಲಿ ಯಾವಾಗಲೂ ಯೋಜನೆಗಳನ್ನು ರೂಪಿಸುವ ಮೂಲಕ ಕ್ರಿಕೆಟ್ ಆಡುತ್ತಾರೆ ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿದರು. ಈ ಸಮಯದಲ್ಲಿ, ಅವರು ತಮ್ಮ ಕೊನೆಯ ಟಿ20 ಪಂದ್ಯವನ್ನು ಯಾವಾಗ ಮತ್ತು ಯಾವ ನಗರದಲ್ಲಿ ಆಡಲಿದ್ದಾರೆ ಎಂದು ಹೇಳಿದರು.

ಧೋನಿ ಈ ಹೇಳಿಕೆಯನ್ನು ತನ್ನ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಅದು ಈಗ ಹೆಚ್ಚು ವೈರಲ್ ಆಗುತ್ತಿದೆ. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಅವರ ನಿವೃತ್ತಿಯ ಬಗ್ಗೆ ಕ್ರಿಕೆಟ್ ಲೋಕದಲ್ಲಿ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ.

ಕೊನೆಯ ಐಪಿಎಲ್ ಪಂದ್ಯ ಎಲ್ಲಿ ನಡೆಯಲಿದೆ ಎಂದ ಧೋನಿ?
ಚೆನ್ನೈ ಸೂಪರ್ ಕಿಂಗ್ಸ್ ಶನಿವಾರ ಸಂಜೆ ಟ್ವಿಟ್ಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದೆ. ಇದರಲ್ಲಿ ಧೋನಿ ಕಾರ್ಯಕ್ರಮವೊಂದರಲ್ಲಿ ತಮ್ಮ ವೃತ್ತಿಜೀವನದ ಬಗ್ಗೆ ಮಾತನಾಡುತ್ತಿದ್ದಾರೆ. ಇದರಲ್ಲಿ ಧೋನಿ ಅವರು ತಮ್ಮ ವೃತ್ತಿಜೀವನದಲ್ಲಿ ಯಾವಾಗಲೂ ಯೋಜನೆಗಳನ್ನು ರೂಪಿಸುವ ಮೂಲಕ ಕ್ರಿಕೆಟ್ ಆಡುತ್ತಿದ್ದರು ಎಂದು ಹೇಳಿದರು. ನಾನು ನನ್ನ ಕೊನೆಯ ಏಕದಿನ ಪಂದ್ಯವನ್ನು ತವರು ರಾಂಚಿಯಲ್ಲಿ ಆಡಿದ್ದೇನೆ ಮತ್ತು ನನ್ನ ಕೊನೆಯ ಟಿ20 ಪಂದ್ಯವನ್ನು ಚೆನ್ನೈನಲ್ಲಿ ಆಡುವ ಭರವಸೆ ಇದೆ ಎಂದು ಧೋನಿ ಹೇಳಿದ್ದಾರೆ. ಆದರೆ ಧೋನಿ ತಮ್ಮ ನಿವೃತ್ತಿಯ ಬಗ್ಗೆ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ. 'ನನ್ನ ಕೊನೆಯ ಪಂದ್ಯ ಮುಂದಿನ ವರ್ಷವೂ ಆಗಬಹುದು ಮತ್ತು 5 ವರ್ಷಗಳ ನಂತರವೂ ಆಗಬಹುದು' ಎಂದು ಅವರು ಹೇಳಿದರು.

ಧೋನಿ ನಾಯಕತ್ವದಲ್ಲಿ ಚೆನ್ನೈ ಐಪಿಎಲ್ 2021ರ ಚಾಂಪಿಯನ್ ಆಗಿತ್ತು!
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2021 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹಲವು ಪಂದ್ಯಗಳಲ್ಲಿ ಧೋನಿ ಅತ್ಯಂತ ವೇಗದ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಜಯ ತಂದುಕೊಟ್ಟಿದ್ದರು. ಇದು ಧೋನಿ ಅವರ ಕೊನೆಯ ಐಪಿಎಲ್ ಎಂದು ಊಹಾಪೋಹಗಳು ಇದ್ದವು. ಆದರೆ ಅವರು ಅಂತಹ ವರದಿಗಳನ್ನು ನಿರಾಕರಿಸಿದರು ಮತ್ತು ಸದ್ಯಕ್ಕೆ ನಿವೃತ್ತಿಯ ಬಗ್ಗೆ ಯೋಚಿಸುವುದಿಲ್ಲ ಎಂದು ಹೇಳಿದರು.

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಮೆಂಟರ್ ಆಗಿದ್ದರು
ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್‌ನಲ್ಲಿ ಹಿರಿಯ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಟೀಂ ಇಂಡಿಯಾದ ಮೆಂಟರ್ ಆಗಿದ್ದರು. ಧೋನಿಯ ಅನುಭವದಿಂದ ತಂಡಕ್ಕೆ ಲಾಭವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಭಾರತ ತಂಡದ ಪ್ರದರ್ಶನ ನಿರಾಶಾದಾಯಕವಾಗಿದ್ದು, ಸೆಮಿಫೈನಲ್‌ಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ನಂತರ ಧೋನಿ ನವೆಂಬರ್ 9ರಂದು ರಾಂಚಿಗೆ ಮರಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com