ನಾಲ್ಕನೇ ಟೆಸ್ಟ್: 290 ರನ್ ಗಳಿಗೆ ಇಂಗ್ಲೆಂಡ್ ಆಲೌಟ್, 99 ರನ್ ಗಳ ಮುನ್ನಡೆ

ಒವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೆ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 290 ರನ್ ಗಳಿಗೆ ಆಲೌಟ್ ಆಯಿತು.
ಟೀಂ ಇಂಡಿಯಾ ಆಟಗಾರರು
ಟೀಂ ಇಂಡಿಯಾ ಆಟಗಾರರು

ಲಂಡನ್: ಒವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೆ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 290 ರನ್ ಗಳಿಗೆ ಆಲೌಟ್ ಆಯಿತು.

ಭರವಸೆಯ ಓಲಿ ಪೋಪ್ (81) ಹಾಗೂ ಆಲ್ ರೌಂಡರ್ ಕ್ರಿಸ್ ವೋಕ್ಸ್ (50) ಬಾರಿಸಿದ ಅರ್ಧಶತಕದ ಬಲದಿಂದ ಆತಿಥೇಯ ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ 99 ರನ್ ಗಳ ಇನ್ನಿಂಗ್ಸ್ ಮುನ್ನಡೆ ಸಾಧಿಸಿದೆ. 

ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 43 ರನ್ ಗಳಿಸಿದ್ದು, ರೋಹಿತ್ ಶರ್ಮಾ 20 ಮತ್ತು ಕೆಎಲ್ ರಾಹುಲ್ 22 ರನ್  ಗಳೊಂದಿಗೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com