ಟಿ20 ವಿಶ್ವಕಪ್ ಟೂರ್ನಿಗೆ ಆಫ್ಘಾನಿಸ್ತಾನ ತಂಡ ಪ್ರಕಟ, ಮನನೊಂದು ನಾಯಕತ್ವಕ್ಕೆ ರಶೀದ್ ಖಾನ್ ರಾಜಿನಾಮೆ; ಕಾರಣ ಏನು?

ಆಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಇತ್ತ ಟಿ20 ವಿಶ್ವಕಪ್ ಟೂರ್ನಿಗೆ ಆಫ್ಘಾನಿಸ್ತಾನ ತಂಡ ಸಿದ್ಧತೆ ನಡೆಸಿದ್ದು, ನಿನ್ನೆ ತನ್ನ ಅಧಿಕೃತ ತಂಡವನ್ನು ಪ್ರಕಟಿಸಿತ್ತು. ಆದರೆ ಈ ಬೆಳವಣಿಗೆ ಬೆನ್ನಲ್ಲೇ ತಂಡದ ನಾಯಕ ರಶೀದ್ ಖಾನ್ ತಮ್ಮ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಆಫ್ಘಾನಿಸ್ತಾನದ ಆಟಗಾರ ರಶೀದ್ ಖಾನ್
ಆಫ್ಘಾನಿಸ್ತಾನದ ಆಟಗಾರ ರಶೀದ್ ಖಾನ್
Updated on

ಕಾಬೂಲ್: ಆಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಇತ್ತ ಟಿ20 ವಿಶ್ವಕಪ್ ಟೂರ್ನಿಗೆ ಆಫ್ಘಾನಿಸ್ತಾನ ತಂಡ ಸಿದ್ಧತೆ ನಡೆಸಿದ್ದು, ನಿನ್ನೆ ತನ್ನ ಅಧಿಕೃತ ತಂಡವನ್ನು ಪ್ರಕಟಿಸಿತ್ತು. ಆದರೆ ಈ ಬೆಳವಣಿಗೆ ಬೆನ್ನಲ್ಲೇ ತಂಡದ ನಾಯಕ ರಶೀದ್ ಖಾನ್ ತಮ್ಮ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಜಗತ್ತಿನ ಎಲ್ಲ ಕ್ರಿಕೆಟ್ ದೇಶಗಳು ತಮ್ಮ ತಮ್ಮ ತಂಡದ ಆಟಗಾರರ ಪಟ್ಟಿ ಪ್ರಕಟಿಸುತ್ತಿದ್ದು, ಇತ್ತೀಚೆಗಷ್ಟೇ ಭಾರತ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ದೇಶಗಳು ತಂಡ ಪ್ರಕಟಿಸಿದ್ದವು. ಅದರಂತೆ ನಿನ್ನೆ ಆಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಕೂಡ ತನ್ನ 18 ಆಟಗಾರರನ್ನು  ಪ್ರಕಟಿಸಿದ್ದು, ಈ ಬೆಳವಣಿಗೆ ಬೆನ್ನಲ್ಲೇ ತಂಡದ ನಾಯಕ ರಶೀದ್ ಖಾನ್ ತಮ್ಮ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ತಂಡದ ಆಯ್ಕೆ ವಿಚಾರದಲ್ಲಿ ತೀವ್ರ ಬೇಸರ ವ್ಯಕ್ತಪಡಿಸಿರುವ ರಶೀದ್ ಖಾನ್ ತಮ್ಮ ನಾಯಕ ಸ್ಥಾನ ತ್ಯಜಿಸಿದ್ದಾರೆ ಎನ್ನಲಾಗಿದೆ.

'ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತಂಡವನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಅಫ್ಗಾನಿಸ್ತಾನ ಕ್ರಿಕೆಟ್ ತಂಡದ ನಾಯಕನಾದ ನನ್ನನ್ನು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಪರಿಗಣಿಸಬೇಕಿತ್ತು, ಆದರೆ ನನಗೆ ಯಾವುದೇ ಮಾಹಿತಿಯನ್ನು ನೀಡದೇ ಇಡೀ ತಂಡವನ್ನು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಆಯ್ಕೆ ಮಾಡಿ  ಘೋಷಣೆ ಮಾಡಿದ್ದು ಮನಸ್ಸಿಗೆ ಬೇಸರ ತಂದಿದೆ. ಹೀಗಾಗಿ ನಾನು ಅಫ್ಘಾನಿಸ್ತಾನ ಟಿ ಟ್ವೆಂಟಿ ತಂಡದ ನಾಯಕ ಸ್ಥಾನದಿಂದ ತಕ್ಷಣವೇ ಕೆಳಗಿಳಿಯುತ್ತಿದ್ದೇನೆ ಎಂದು ರಶೀದ್ ಖಾನ್ ಟ್ವೀಟ್ ಮಾಡಿದ್ದಾರೆ.

ಅಫ್ಘಾನಿಸ್ತಾನದ ಪ್ರತಿಭಾವಂತ ಆಟಗಾರ ರಶೀದ್ ಖಾನ್ ಇದೇ ವರ್ಷದ ಜುಲೈ ತಿಂಗಳಿನಲ್ಲಿ ಅಫ್ಘಾನಿಸ್ತಾನ ಟಿ ಟ್ವೆಂಟಿ ತಂಡದ ನಾಯಕನಾಗಿ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದರು. ಅಫ್ಘಾನಿಸ್ತಾನದ ನಾಯಕನಾಗುವಂತೆ ಆಫರ್ ಬಂದಾಗ ಹೆಚ್ಚಿನ ಒತ್ತಡಕ್ಕೆ ಒಳಗಾಗಲು ಇಚ್ಛಿಸದ ರಶೀದ್ ಖಾನ್ ನಾಯಕ  ಪಟ್ಟವನ್ನು ಅಲಂಕರಿಸಲು ಹಿಂದೇಟು ಹಾಕಿದ್ದರು, ಆದರೆ ತದನಂತರ ಅಫ್ಘಾನಿಸ್ತಾನದ ನಾಯಕನಾಗಲು ರಶೀದ್ ಖಾನ್ ಗ್ರೀನ್ ಸಿಗ್ನಲ್ ನೀಡಿದ್ದರು. ಇದೀಗ ಅಫ್ಘಾನಿಸ್ತಾನದ ನಾಯಕನಾಗಿ ಆಯ್ಕೆಯಾಗಿ 3 ತಿಂಗಳು ಕಳೆಯುವಷ್ಟರಲ್ಲಿಯೇ ರಶೀದ್ ಖಾನ್ ನಾಯಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 9ರ ಗುರುವಾರದಂದು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಅಕ್ಟೋಬರ್ 17ರಿಂದ ನವೆಂಬರ್‌ 14ರವರೆಗೆ ಯುಎಇಯಲ್ಲಿ ನಡೆಯಲಿರುವ ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ 18 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಣೆ ಮಾಡಿದೆ. 

ಟಿ20 ವಿಶ್ವಕಪ್ ಟೂರ್ನಿಗೆ ತಂಡ ಇಂತಿದೆ
ರಶೀದ್ ಖಾನ್, ರಹಮತುಲ್ಲಾ ಗುರ್ಬಾಜ್, ಹಜರತುಲ್ಲಾ ಜಾಜೈ, ಉಸ್ಮಾನ್ ಘನಿ, ಅಸ್ಘರ್ ಅಫ್ಘಾನ್, ಮೊಹಮ್ಮದ್ ನಬಿ, ನಜೀಬುಲ್ಲಾ ಜ಼ದ್ರಾನ್, ಹಷ್ಮತುಲ್ಲಾ ಶಾಹಿದಿ, ಮೊಹಮ್ಮದ್ ಶಹಜಾದ್, ಮುಜೀಬ್ ಉರ್ ರಹಮಾನ್, ಕರೀಂ ಜನತ್, ಗುಲ್ಬದಿನ್ ನಾಯ್ಬ್, ನವೀನ್ ಉಲ್ ಹಕ್, ಹಮೀದ್ ಹಸ್ದಾನ್,  ಶರಾಫುದ್ದೀನ್ ಅಶ್ರಫ್, ದಾವ್ಲತ್ ಜದ್ರಾನ್, ಶಪೂರ್ ಜ಼ದ್ರಾನ್ ಮತ್ತು ಕೈಸ್ ಅಹ್ಮದ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com