ಐಪಿಎಲ್ 2021: ನಾಳೆ ಶಾರ್ಜಾದಲ್ಲಿ ಸಿಎಸ್ ಕೆ, ರಾಯಲ್ ಚಾಲೆಂಜರ್ಸ್ ನಡುವಣ ಕಾದಾಟ
ಶಾರ್ಜಾ: ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಹಾಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಸೈನ್ಯ ಶುಕ್ರವಾರ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮುಂದಾಳತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕಾದಾಟ ನಡೆಸಲಿದೆ.
14ನೇ ಆವೃತ್ತಿಯ ಐಪಿಎಲ್ ನ ಮೊದಲ ಚರಣದಲ್ಲಿ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿತ್ತು. ಆದರೆ ಎರಡನೇ ಚರಣದ ಮೊದಲ ಪಂದ್ಯದಲ್ಲಿ ನಿರಾಸೆ ಅನುಭವಿಸಿತ್ತು. ಸೋಲಿನ ಕಹಿಯನ್ನು ಮರೆತು ಜಯದ ಲಯ ಕಂಡುಕೊಳ್ಳಲು ವಿರಾಟ್ ಪಡೆ ಅಂಗಳಕ್ಕೆ ಇಳಿಯಲಿದೆ.
ಇನ್ನು ಮೊದಲ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ಹಾಲಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಚೆನ್ನೈ ಅಬ್ಬರಿಸಿತ್ತು. ಈ ಪಂದ್ಯದಲ್ಲಿ ಗೆದ್ದು ಚೆನ್ನೈ ಅಗ್ರ ಸ್ಥಾನಕ್ಕೆ ಏರುವ ಕನಸು ಕಾಣುತ್ತಿದೆ.
ಇನ್ನು ಚೆನ್ನೈ ಆಡಿರುವ 8 ಪಂದ್ಯಗಳಿಂದ 6 ಜಯ, 2 ಸೋಲು ಕಂಡಿದ್ದು 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆರ್ ಸಿಬಿ ಸಹ ಇಷ್ಟೇ ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು 10 ಅಂಕ ಸೇರಿಸಿ, ಮೂರನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ