ಕೊರೋನಾ ಪಾಸಿಟಿವ್ ಹಿನ್ನೆಲೆ: ಸಚಿನ್ ತೆಂಡುಲ್ಕರ್ ಆಸ್ಪತ್ರೆಗೆ ದಾಖಲು 

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

Published: 02nd April 2021 11:17 AM  |   Last Updated: 02nd April 2021 11:17 AM   |  A+A-


Sachin Tendulkar

ಸಚಿನ್ ತೆಂಡುಲ್ಕರ್

Posted By : Sumana Upadhyaya
Source : PTI

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರು ದಿನಗಳ ಹಿಂದೆ ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಇಷ್ಟು ದಿನ ಹೋಂ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗುಣಮುಖವಾಗದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ವಿಷಯವನ್ನು ಸ್ವತಃ ಸಚಿನ್ ತೆಂಡುಲ್ಕರ್ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.ವೈದ್ಯರ ಸಲಹೆ ಮೇರೆಗೆ ತೀವ್ರ ಮುನ್ನೆಚ್ಚರಿಕೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರದಲ್ಲಿಯೇ ಮನೆಗೆ ಮರಳುವ ವಿಶ್ವಾಸವಿದೆ, ಎಲ್ಲರೂ ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.

ಅಲ್ಲದೇ ಭಾರತ ಕ್ರಿಕೆಟ್ ನಲ್ಲಿ ವಿಶ್ವಕಪ್ ಗೆದ್ದು 10 ವರ್ಷವಾದ ಹಿನ್ನೆಲೆಯಲ್ಲಿ ಎಲ್ಲಾ ಭಾರತೀಯರಿಗೆ ಮತ್ತು ಕ್ರಿಕೆಟ್ ತಂಡದ ಆಟಗಾರರಿಗೆ ಶುಭಾಶಯ ತಿಳಿಸಿದ್ದಾರೆ.

Stay up to date on all the latest ಕ್ರಿಕೆಟ್ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp