ಐಪಿಎಲ್ ಲೋಗೊ ಮತ್ತು ಎಬಿ ಡಿವಿಲಿಯರ್ಸ್ ಶಾಟ್: ರಹಸ್ಯ ಬಿಚ್ಚಿಟ್ಟ ವೀರೇಂದ್ರ ಸೆಹ್ವಾಗ್!

2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ 14ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮಿಂಚಿದ್ದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಎಬಿ ಡಿವಿಲಿಯರ್ಸ್
ಎಬಿ ಡಿವಿಲಿಯರ್ಸ್

ಚೆನ್ನೈ: 2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ 14ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮಿಂಚಿದ್ದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. 

ಎಬಿ ಡಿವಿಲಿಯರ್ಸ್ ಆಟದ ಬಗ್ಗೆ ಪ್ರಶಂಸಿಸಿರುವ ವಿರೇಂದ್ರ ಸೆಹ್ವಾಗ್ ಅವರು ಐಪಿಎಲ್ ಟೂರ್ನಿಯ ಲೋಗೋ ಮತ್ತು ಡಿವಿಲಿಯರ್ಸ್ ಬ್ಯಾಟಿಂಗ್ ಶೈಲಿ ಕುರಿತಂತೆ ರಹಸ್ಯವೊಂದನ್ನು ಬಿಚ್ಚಿಟ್ಟಿದ್ದಾರೆ. 

ಐಪಿಎಲ್ ಲೋಗೊವನ್ನು ಎಬಿಡಿ ವಿಲಿಯರ್ಸ್ ಅವರಿಗಾಗಿ ರಹಸ್ಯವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಟ್ವೀಟಿಸಿದ್ದಾರೆ. ಇದಕ್ಕೆ ಕಾರಣ ಐಪಿಎಲ್ ಲೋಗೋ ಮತ್ತು ಡಿವಿಲಿಯರ್ಸ್ ಹೊಡೆತದ ಭಂಗಿಯನ್ನು ಹೋಲುತ್ತದೆ. ಹೀಗಾಗಿಯೇ ಸೆಹ್ವಾಗ್ ಈ ರೀತಿ ಹೇಳಿದ್ದಾರೆ. 

ಐಪಿಎಲ್ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಮುಂಬೈ ಮತ್ತು ಬೆಂಗಳೂರು ನಡುವೆ ನಡೆದಿದ್ದು ಈ ಪಂದ್ಯದಲ್ಲಿ ಆರ್ ಸಿಬಿ 2 ವಿಕೆಟ್ ಗಳಿಂದ ಗೆಲುವು ಸಾಧಿಸಿದ್ದು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com