ಐಪಿಎಲ್ ಇತಿಹಾಸದಲ್ಲೇ ಮುಂಬೈ ವಿರುದ್ಧ ಈ ದಾಖಲೆ ಬರೆದ ಮೊದಲ ಬೌಲರ್ ಆರ್‌ಸಿಬಿಯ ಹರ್ಷಲ್ ಪಟೇಲ್, ವಿಡಿಯೋ!

ಐಪಿಎಲ್ 14ನೇ ಆವೃತ್ತಿಯ ಉದ್ಘಾಟನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ವಿರುದ್ಧ 2 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ನಡುವೆ ಆರ್‌ಸಿಬಿಯ ಬೌಲರ್ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಯಾರೂ ಮಾಡದ ದಾಖಲೆಯೊಂದನ್ನು ಮಾಡಿದ್ದಾರೆ.
ಹರ್ಷಲ್ ಪಟೇಲ್
ಹರ್ಷಲ್ ಪಟೇಲ್

ಚೆನ್ನೈ: ಐಪಿಎಲ್ 14ನೇ ಆವೃತ್ತಿಯ ಉದ್ಘಾಟನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ವಿರುದ್ಧ 2 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ನಡುವೆ ಆರ್‌ಸಿಬಿಯ ಬೌಲರ್ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಯಾರೂ ಮಾಡದ ದಾಖಲೆಯೊಂದನ್ನು ಮಾಡಿದ್ದಾರೆ. 

ಐಪಿಎಲ್ ನಲ್ಲಿ ಐದು ಬಾರಿ ಚಾಂಪಿಯನ್ಸ್ ಆಗಿರುವ ಮುಂಬೈ ಇಂಡಿಯನ್ಸ್ ವಿರುದ್ಧ ಹರ್ಷಲ್ ಪಟೇಲ್ 5 ವಿಕೆಟ್ ಗಳ ಗುಚ್ಚ ಪಡೆದಿದ್ದಾರೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 2021ರ ಐಪಿಎಲ್ ನಲ್ಲಿ ಹರ್ಷಲ್ ಕೊನೆಯ ಓವರ್ ನಲ್ಲಿ ಮೂರು ವಿಕೆಟ್ ಪಡೆದು ಈ ಸಾಧನೆ ಮಾಡಿದರು. 

ತಂಡದ ಪರವಾಗಿ 16 ಮತ್ತು 18ನೇ ಓವರ್ ಗಳಲ್ಲಿ ಕ್ರಮವಾಗಿ ಹಾರ್ದಿಕ್ ಪಾಂಡ್ಯ ಹಾಗೂ ಇಶಾನ್ ಕಿಶನ್ ಅವರನ್ನು ಔಟ್ ಮಾಡಿದ್ದ ಹರ್ಷಲ್ ಪಟೇಲ್ 20ನೇ ಓವರ್ ನಲ್ಲಿ ಕೃಣಾಲ್ ಪಾಂಡ್ಯ, ಮಾರ್ಕೋ ಜೆನ್ಸನ್ ಹಾಗೂ ಕೈರೊನ್ ಪೊಲಾರ್ಡ್ ವಿಕೆಟ್ ಪಡೆದಿದ್ದಾರೆ. 

ಇದರೊಂದಿಗೆ ಮುಂಬೈ ತಂಡವನ್ನು 159 ರನ್ ಗಳಿಗೆ ಕಟ್ಟಿ ಹಾಕಲು ಸಾಧ್ಯವಾಯಿತು. 160 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿಬಿ ತಂಡ ಕೊನೆಯ ಎಸೆತದಲ್ಲಿ 1 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು. 

ಮುಂಬೈ ಪರ ಕ್ರಿಸ್ ಲಿನ್ (49), ಸೂರ್ಯಕುಮಾರ್ ಯಾದವ್ (31), ಇಶಾನ್ ಕಿಶನ್ (29) ಉತ್ತಮ ಮೊತ್ತ ಕಲೆ ಹಾಕಿದ್ದರು. ಆರ್ಸಿಬಿ ಪರ ಹರ್ಷಲ್ ಪಟೇಲ್ 5 ವಿಕೆಟ್ ಪಡೆದು ಮಿಂಚಿದರೆ ವಾಷಿಂಗ್ಟನ್ ಸುಂದರ್, ಕೈಲ್ ತಲಾ ಒಂದು ವಿಕೆಟ್ ಪಡೆದರು.

ಮುಂಬೈನಿಂದ 160 ರನ್ ಗುರಿ ಪಡೆದ ಬೆಂಗಳೂರು ಪರ ಜಿಜೆ ಮ್ಯಾಕ್ಸ್ ವೆಲ್ (39), ಎಬಿಡಿ (43), ನಾಯಕ ಕೊಹ್ಲಿ (33) ಉತ್ತಮ ಪ್ರದರ್ಶನ ನೀಡಿದ್ದರು. ಬೆಂಗಳೂರು ನಿಗದಿತ ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com