ಐಪಿಎಲ್ 2021: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೆಕೆಆರ್ ಗೆ 10 ರನ್ ಗಳ ಗೆಲುವು

ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 14ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 10 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.
ನಿತೀಶ್ ರಾಣಾ
ನಿತೀಶ್ ರಾಣಾ

ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 14ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 10 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಟಾಸ್ ಸೋತು  ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ನಿತೀಶ್ ರಾಣಾ ಅವರ 80 ಹಾಗೂ ರಾಹುಲ್ ತ್ರಿಪಾಠಿ ಅವರ ಆಕರ್ಷಕ 53 ರನ್ ಗಳ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 187 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತ್ತು. 

ನಂತರ ಈ ಗುರಿ ಬೆನ್ನಟ್ಟಿದ್ದ ಸನ್ ರೈಸರ್ಸ್ ಮನೀಶ್ ಪಾಂಡೆ 61 ಹಾಗೂ ಜಾನಿ ಬೆಸ್ಟೊ 55 ರನ್ ಗಳ ಹೊರತಾಗಿಯೂ ಐದು ವಿಕೆಟ್ ನಷ್ಟಕ್ಕೆ 177 ರನ್ ಗಳಿಸಲಷ್ಟೇ ಶಕ್ತವಾಯಿತು.

ಸನ್ ರೈಸರ್ಸ್ ಪರ ಮನೀಶ್ ಪಾಂಡೆ 61,  ಜಾನಿ ಬೇಸ್ಟೋರ್ವ್ 55, ಅಬ್ದುಲ್ ಸಮದ್ 19 ರನ್ ಗಳಿಸಿದರು. ಕೆಕೆಆರ್ ಪರ ಪ್ರಸಿದ್ಧ್ ಕೃಷ್ಣ2, ಪ್ಯಾಟ್ ಕಮ್ಮಿನ್ಸ್  ಹಾಗೂ ಆಂಡ್ರೆ ರಸೆಲ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com