ಟಿ20 ವಿಶ್ವಕಪ್‌ಗೆ ಬೆಂಗಳೂರು ಸೇರಿದಂತೆ 9 ಸ್ಥಳಗಳನ್ನು ಆಯ್ಕೆ ಮಾಡಿದ ಬಿಸಿಸಿಐ

ಈ ವರ್ಷ ಅಕ್ಟೋಬರ್-ನವೆಂಬರ್ ನಲ್ಲಿ ನಡೆಯುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಬೆಂಗಳೂರು ಸೇರಿದಂತೆ ಭಾರತದಲ್ಲಿ ಒಂಬತ್ತು ಸ್ಥಳಗಳನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಆಯ್ಕೆ ಮಾಡಿದೆ.
ಬಿಸಿಸಿಐ
ಬಿಸಿಸಿಐ

ಚೆನ್ನೈ: ಈ ವರ್ಷ ಅಕ್ಟೋಬರ್-ನವೆಂಬರ್ ನಲ್ಲಿ ನಡೆಯುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಬೆಂಗಳೂರು ಸೇರಿದಂತೆ ಭಾರತದಲ್ಲಿ ಒಂಬತ್ತು ಸ್ಥಳಗಳನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಆಯ್ಕೆ ಮಾಡಿದೆ.

ಟಿ20 ವಿಶ್ವಕಪ್‌ ಟೂರ್ನಿಯ ಪಂದ್ಯಗಳಿಗೆ ಮುಂಬೈ, ದೆಹಲಿ, ಚೆನ್ನೈ, ಕೋಲ್ಕತಾ, ಬೆಂಗಳೂರು, ಹೈದರಾಬಾದ್‌, ಅಹ್ಮದಾಬಾದ್‌ ಹಾಗೂ ಲಖನೌ ನಗರಗಳನ್ನು ಆಯ್ಕೆ ಮಾಡಲಾಗಿದೆ.

ಈ ಬಾರಿ ಅಹ್ಮದಾಬಾದ್‌, ಚೆನ್ನೈ ಹಾಗೂ ಲಖನೌ ಸೇರಿ ಮೂರು ಹೊಸ ಸ್ಥಳಗಳನ್ನು ವಿಶ್ವಕಪ್‌ ಪಂದ್ಯಗಳಿಗೆ ಆಯ್ಕೆ ಮಾಡಲಾಗಿದೆ. ಇನ್ನುಳದ ಆರು ಸ್ಥಳಗಳಲ್ಲಿ 2016ರ ಟಿ20 ವಿ‍ಶ್ವಕಪ್‌ ಟೂರ್ನಿಯ ಪಂದ್ಯಗಳು ನಡೆದಿದ್ದವು.

2021ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹಲವು ವರದಿಗಳು ತಿಳಿಸಿವೆ.

ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರ ನಡುವೆಯೂ ಟಿ20 ವಿಶ್ವಕಪ್‌ ಟೂರ್ನಿ ಆಯೋಜಿಸಲು ಈಗಾಗಲೇ ಒಂಬತ್ತು ಸ್ಥಳಗಳಿಗೆ ಮಾಹಿತಿ ನೀಡಲಾಗಿದೆ ಹಾಗೂ ಚುಟುಕು ವಿಶ್ವಕಪ್‌ ಟೂರ್ನಿಗೆ ಪೂರ್ವ ತಯಾರಿ ಆರಂಭಿಸುವಂತೆಯೂ ಸೂಚಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ಎಎನ್‌ಐಗೆ ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com