ಟಿ-20 ವಿಶ್ವಕಪ್ ಟೂರ್ನಿ: ಪಾಕ್ ಕ್ರಿಕೆಟ್ ಆಟಗಾರರಿಗೆ ವೀಸಾ ಸಿಗಲಿದೆ- ಬಿಸಿಸಿಐ ಅಪೆಕ್ಸ್ ಕೌನ್ಸಿಲ್‌

ಅಕ್ಟೋಬರ್‌ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿರುವ ಟಿ–20 ವಿಶ್ವಕಪ್‌ ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನದ ಕ್ರಿಕೆಟ್ ಆಟಗಾರರಿಗೆ ವೀಸಾ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಅವರು ಬಿಸಿಸಿಐನ ಅಪೆಕ್ಸ್ ಕೌನ್ಸಿಲ್‌ಗೆ ತಿಳಿಸಿದ್ದಾರೆ.

Published: 17th April 2021 12:53 PM  |   Last Updated: 17th April 2021 01:00 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ನವದೆಹಲಿ: ಅಕ್ಟೋಬರ್‌ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿರುವ ಟಿ–20 ವಿಶ್ವಕಪ್‌ ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನದ ಕ್ರಿಕೆಟ್ ಆಟಗಾರರಿಗೆ ವೀಸಾ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಅವರು ಬಿಸಿಸಿಐನ ಅಪೆಕ್ಸ್ ಕೌನ್ಸಿಲ್‌ಗೆ ತಿಳಿಸಿದ್ದಾರೆ.

ಶುಕ್ರವಾರ ನಡೆದ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿರುವ ಶಾ ಅವರು ಕೌನ್ಸಿಲ್‌ಗೆ ಈ ವಿಷಯ ತಿಳಿಸಿದ್ದಾರೆಂದು ತಿಳಿದುಬಂದಿದೆ. 

ಇದೇ ವೇಳೆ, ಟಿ–20 ವಿಶ್ವಕಪ್ ಟೂರ್ನಿಯನ್ನು ದೇಶದ 9 ಸ್ಥಳಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯವನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತ, ಬೆಂಗಳೂರು, ಹೈದರಾಬಾದ್, ಧರ್ಮಶಾಲಾ ಮತ್ತು ಲಖನೌದಲ್ಲಿ ಪಂದ್ಯಗಳು ನಡೆಯಲಿವೆ ಎಂದು ವರದಿಗಳು ತಿಳಿಸಿವೆ. 

‘ಪಾಕಿಸ್ತಾನ ಕ್ರಿಕೆಟ್ ತಂಡದ ವೀಸಾ ಸಮಸ್ಯೆ ಬಗೆಹರಿದಿದೆ. ಆದರೂ, ಪಂದ್ಯಗಳನ್ನು ವೀಕ್ಷಿಸಲು ಅಭಿಮಾನಿಗಳು ಗಡಿ ದಾಟಿ ಬರಬಹುದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ’ ಎಂದು ಅಪೆಕ್ಸ್ ಕೌನ್ಸಿಲ್ ಸದಸ್ಯರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

‘ಈ ಬಗ್ಗೆ ಸರಿಯಾದ ಸಮಯದಲ್ಲಿ ನಿರ್ಧರಿಸಲಾಗುವುದು ಎಂದು ನಾವು ಐಸಿಸಿಗೆ ಭರವಸೆ ನೀಡಿದ್ದೇವೆ’ ಎಂದು ಸಭೆಯಲ್ಲಿ ಕಾರ್ಯದರ್ಶಿ ಶಾ ಘೋಷಿಸಿದರು.

ಉಭಯ ದೇಶಗಳ ರಾಜತಾಂತ್ರಿಕ ಉದ್ವಿಗ್ನತೆಯಿಂದಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದು ದಶಕದಿಂದ ಕ್ರಿಕೆಟ್ ಸರಣಿ ಆಡಿಲ್ಲ.

ಈ ವರ್ಷ ನಡೆಯಲಿರುವ ಟಿ–20 ವಿಶ್ವಕಪ್ 7ನೇ ಆವೃತ್ತಿಯಲ್ಲಿ ಭಾಗವಹಿಸಲು ತನ್ನ ಆಟಗಾರರಿಗೆ ವೀಸಾ ನೀಡಿಕೆ ಬಗ್ಗೆ ಸ್ಪಷ್ಟನೆ ನೀಡುವಂತೆ ಪಾಕಿಸ್ತಾನವು ಐಸಿಸಿಯನ್ನು ಒತ್ತಾಯಿಸಿತ್ತು.

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp