ಸತತ ಮೂರನೇ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ

ಗ್ಲೇನ್ ಮ್ಯಾಕ್ಸ್ ವೆಲ್ ಮತ್ತು ಎಬಿ ಡಿವಿಲಿಯರ್ಸ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಬೃಹತ್ ಮೊತ್ತ ಕಲೆ ಹಾಕಿದ್ದು 38 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಆರ್ ಸಿಬಿ
ಆರ್ ಸಿಬಿ

ಚೆನ್ನೈ: ಗ್ಲೇನ್ ಮ್ಯಾಕ್ಸ್ ವೆಲ್ ಮತ್ತು ಎಬಿ ಡಿವಿಲಿಯರ್ಸ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಬೃಹತ್ ಮೊತ್ತ ಕಲೆ ಹಾಕಿದ್ದು 38 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. 

ಚೆನ್ನೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಆರ್ ಸಿಬಿ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಪೇರಿಸಿತ್ತು. ಆರ್‌ಸಿಬಿ ನೀಡಿದ 205 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಕೆಕೆಆರ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 166 ರನ್ ಪೇರಿಸಿ 39 ರನ್ ಗಳಿಂದ ಆರ್‌ಸಿಬಿಗೆ ಶರಣಾಗಿದೆ. 

ಆರ್‌ಸಿಬಿ ಪರ ವಿರಾಟ್ ಕೊಹ್ಲಿ 5 ರನ್, ದೇವದತ್ತ್ ಪಡಿಕ್ಕಲ್ 25, ಗ್ಲೇನ್ ಮ್ಯಾಕ್ಸ್ ವೆಲ್ 78 ಮತ್ತು ಡಿವಿಲಿಯರ್ಸ್ ಅಜೇಯ 76 ರನ್ ಬಾರಿಸಿದ್ದಾರೆ.

ಕೋಲ್ಕತ್ತಾ ಪರ ವರುಣ್ ಚಕ್ರವರ್ತಿ 2, ಪ್ಯಾಟ್ ಕಮಿನ್ಸ್ ಮತ್ತು ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಪಡೆದಿದ್ದಾರೆ. 

ಇನ್ನು ಕೋಲ್ಕತ್ತಾ ಪರ ನಿತೀಶ್ ರಾಣಾ 18, ಶುಭ್ಮನ್ ಗಿಲ್ 21, ರಾಹುಲ್ ತ್ರಿಪಾಠಿ 25, ಇಯಾನ್ ಮೋರ್ಗನ್ 29, ಶಕೀಬ್ ಅಲ್ ಹಸನ್ 26 ಮತ್ತು ಆಂಡ್ರೆ ರಸ್ಸೆಲ್ 31 ರನ್ ಬಾರಿಸಿದ್ದಾರೆ. 

ಆರ್ ಸಿಬಿ ಪರ ಜೇಮಿಸನ್ 3, ಚಹಾಲ್, ಹರ್ಷಲ್ ಪಟೇಲ್ ತಲಾ 2 ವಿಕೆಟ್ ಪಡೆದಿದ್ದಾರೆ. 

ಟೂರ್ನಿಯಲ್ಲಿ ಮೂರು ಪಂದ್ಯಗಳನ್ನಾಡಿರುವ ಆರ್ ಸಿಬಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com