ಲಂಕಾ ಕ್ರಿಕೆಟ್ ದಂತಕಥೆ ಮುರಳೀಧರನ್ ಗೆ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಯಶಸ್ವಿ

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರಿಗೆ ಯಶಸ್ವಿ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚೆನ್ನೈ: ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರಿಗೆ ಯಶಸ್ವಿ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀಲಂಕಾದ ಕ್ರಿಕೆಟ್ ದಂತಕಥೆ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ ತಂಡದ ಬೌಲಿಂಗ್ ಕೋಚ್ ಕೂಡ ಆಗಿರುವ ಮುತ್ತಯ್ಯ ಮುರಳೀಧರನ್ ಅವರು ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ನಿನ್ನೆಯಷ್ಟೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಅವರಿಗೆ ನುರಿತ ವೈದ್ಯರ ತಂಡ  ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಪೋಲೋ ಆಸ್ಪತ್ರೆ ವೈದ್ಯರ ತಂಡ ಇಂದು ಮುರಳೀಧರನ್ ಅವರಿಗೆ ಯಶಸ್ವಿಯಾಗಿ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಅಂತೆಯೇ ಅವರಿಗೆ ಸ್ಟಂಟ್ ಅಳವಡಿಸಲಾಗಿದ್ದು, ಇಂದೇ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಮಾರ್ಚ್ ಕೊನೆಗೆ ಮುರಳೀಧರನ್ ಹೃದಯ ನಾಳದಲ್ಲಿ ತಡೆ (ಬ್ಲಾಕ್) ಕಾಣಿಸಿಕೊಂಡಿತ್ತು. ಆದ್ದರಿಂದ ಆಂಜಿಯೋಪ್ಲಾಸ್ಟಿ ನಡೆಸಬೇಕಾಯಿತು. ಇದೀಗ ಆರೋಗ್ಯವಾಗಿದ್ದು, ಇಂದೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com