ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಗೆ 12 ಲಕ್ಷ ರೂಪಾಯಿ ದಂಡ!

ಮುಂಬೈ ಇಂಡಿಯನ್ಸ್ ನ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಕಾರಣದಿಂದಾಗಿ ರೋಹಿತ್ ಶರ್ಮಾಗೆ ದಂಡ ವಿಧಿಸಲಾಗಿದೆ. 
ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಗೆ 12 ಲಕ್ಷ ರೂಪಾಯಿ ದಂಡ
ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಗೆ 12 ಲಕ್ಷ ರೂಪಾಯಿ ದಂಡ

ಚೆನ್ನೈ: ಮುಂಬೈ ಇಂಡಿಯನ್ಸ್ ನ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಕಾರಣದಿಂದಾಗಿ ರೋಹಿತ್ ಶರ್ಮಾಗೆ ದಂಡ ವಿಧಿಸಲಾಗಿದೆ. 

ಅನುಭವಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ (4/24) ಬೌಲಿಂಗ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್ ತಂಡ 9 ವಿಕೆಟ್ ಗಳ ನಷ್ಟಕ್ಕೆ 137 ರನ್ ಗಳಿಸಿತ್ತು.

ಚೆನ್ನೈ ನ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆದ ಪಂಡ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ಅವರ ತಂಡ ನಿಧಾನಗತಿಯಲ್ಲಿ ಆಡಿದ್ದಕ್ಕಾಗಿ 12 ಲಕ್ಷ ದಂಡ ವಿಧಿಸಲಾಗಿದೆ" ಎಂದು ಐಪಿಎಲ್ ಹೇಳಿಕೆ ಬಿಡುಗಡೆ ಮಾಡಿದೆ. 

ಈ ಐಪಿಎಲ್ ಸೀಸನ್ ನಲ್ಲಿ ಇದು ತಂಡದ ಮೊದಲ ತಪ್ಪಾಗಿರುವುದರಿಂದ ಶರ್ಮಾ ಅವರಿಗೆ 12 ಲಕ್ಷ ರೂಪಾಯಿಗಳ ದಂಡ ವಿಧಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ಐಪಿಎಲ್ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com