ಐಪಿಎಲ್ 2021: ಐಪಿಎಲ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ 2 ದಾಖಲೆ ಬರೆದ ವಿರಾಟ್ ಕೊಹ್ಲಿ

ಆರ್ ಸಿಬಿ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ದೇವದತ್ ಪಡಿಕ್ಕಲ್ ಮತ್ತು ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ.

Published: 23rd April 2021 12:52 AM  |   Last Updated: 23rd April 2021 12:52 AM   |  A+A-


Kohli

ವಿರಾಟ್ ಕೊಹ್ಲಿ

Posted By : Vishwanath S
Source : Online Desk

ಮುಂಬೈ: ಆರ್ ಸಿಬಿ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ದೇವದತ್ ಪಡಿಕ್ಕಲ್ ಮತ್ತು ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. 

ಮುಂಬೈ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ ರಾಯಲ್ಸ್ ತಂಡ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 177 ರನ್ ಪೇರಿಸಿತ್ತು. ಆರ್ ಆರ್ ನೀಡಿದ 178 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿಬಿ ಪರ ದೇವದತ್ ಪಡಿಕ್ಕಲ್ ಅಜೇಯ 101 ರನ್ ಹಾಗೂ ವಿರಾಟ್ ಕೊಹ್ಲಿ ಅಜೇಯ 72 ರನ್ ಬಾರಿಸುವ ಮೂಲಕ ತಂಡಕ್ಕೆ 10 ವಿಕೆಟ್ ಗಳ ಜಯ ತಂದುಕೊಟ್ಟರು. 

ಈ ಪಂದ್ಯದಲ್ಲಿ ಎರಡು ದಾಖಲೆ ಬರೆದ ವಿರಾಟ್ ಕೊಹ್ಲಿ
ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ 5,949 ರನ್ ಗಳಿಸಿದ್ದರು. ಇನ್ನು ಇಂದಿನ ಪಂದ್ಯದಲ್ಲಿ 51 ರನ್ ಹೊಡೆಯುವ ಮೂಲಕ 6 ಸಾವಿರ ರನ್ ಗಳ ಗಡಿಯನ್ನು ದಾಟಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಎರಡು ದಾಖಲೆ ಬರೆದಿದ್ದಾರೆ. 

ಕೊಹ್ಲಿ ಐಪಿಎಲ್ ನಲ್ಲಿ 6 ಸಾವಿರ ರನ್ ಪೂರೈಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದು, ಇದೇ ವೇಳೆ ಒಂದೇ ತಂಡದ ಪರವಾಗಿ ಆಡಿ 6 ಸಾವಿರ ರನ್ ಸಿಡಿಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

700


Stay up to date on all the latest ಕ್ರಿಕೆಟ್ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp