ಐಪಿಎಲ್ 2021: ಆರ್ ಸಿಬಿ- ಸಿಎಸ್ ಕೆ ನಡುವೆ ಪಂದ್ಯ ನಾಳೆ; ಅಗ್ರ ತಂಡಗಳ ನಡುವೆ ಕದನ

ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಪರಸ್ಪರ ಮುಖಾಮುಖಿಯಾಗುತ್ತಿದ್ದು, ಅಗ್ರ ತಂಡಗಳ ನಡುವಿನ ಕದನಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.
ಧೋನಿ-ಕೊಹ್ಲಿ (ಸಂಗ್ರಹ ಚಿತ್ರ)
ಧೋನಿ-ಕೊಹ್ಲಿ (ಸಂಗ್ರಹ ಚಿತ್ರ)

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಪರಸ್ಪರ ಮುಖಾಮುಖಿಯಾಗುತ್ತಿದ್ದು, ಅಗ್ರ ತಂಡಗಳ ನಡುವಿನ ಕದನಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ಇದುವರೆಗೆ ಪಂದ್ಯಗಳನ್ನಾಡಿರುವ ಆರ್ ಸಿಬಿ ನಾಲ್ಕೂ ಪಂದ್ಯವನ್ನೂ ಗೆದ್ದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದರೆ, ಸಿಎಸ್‌ಕೆ ತಮ್ಮ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಜಯಗಳಿಸಿ 2ನೇ ಸ್ಥಾನದಲ್ಲಿದೆ. ತಮ್ಮ ಕೊನೆಯ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್, ದಿನೇಶ್ ಕಾರ್ತಿಕ್ ಮತ್ತು ಪ್ಯಾಟ್ ಕಮ್ಮಿನ್ಸ್ ಅವರನ್ನೊಳಗೊಂಡ  ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಕೆಳ ಕ್ರಮಾಂಕದ ಆರ್ಭಟಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್ ಗಳು ಹೈರಾಣಾಗಿದ್ದರು. ಬೌಲಿಂಗ್ ವಿಭಾಗ ಚೆನ್ನೈ ತಂಡಕ್ಕೆ ಕೊಂಚ ತಲೆನೋವು ತಂದಿದ್ದರೂ ಬ್ಯಾಟಿಂಗ್ ವಿಭಾಗ ಉತ್ತಮವಾಗಿದೆ. ಚೆನ್ನೈ ಮತ್ತು ಬೆಂಗಳೂರು ತಂಡಗಳು ಎಲ್ಲ ವಿಭಾಗದಲ್ಲೂ  ಸಮತೋಲನದಿಂದ ಕೂಡಿದ್ದು, ಒಂದೂ ಸೋಲು ಕಾಣದ ಆರ್ ಸಿಬಿಯಲ್ಲಿ ಆತ್ಮವಿಶ್ವಾಸದಿಂದ ಕೂಡಿದೆ.

ಪ್ರಸ್ತುತ ನಡೆದಿರುವ ಪಂದ್ಯಗಳಲ್ಲಿ ಆರ್‌ಸಿಬಿ ಬ್ಯಾಟಿಂಗ್ ಉತ್ತಮವಾಗಿದ್ದು, ಆರ್ ಸಿಬಿ ಬ್ಯಾಟಿಂಗ್ ಅನ್ನು ನಿಯಂತ್ರಿಸುವ ಸವಾಲು ಸಿಎಸ್‌ಕೆ ಮುಂದಿದೆ. ಕಳೆದ ಪಂದ್ಯದಲ್ಲಿ ಆರ್ ಸಿಬಿ ಆರಂಭಿಕರಾದ ದೇವದತ್ ಪಡಿಕ್ಕಲ್ ಮತ್ತು ನಾಯಕ ಕೊಹ್ಲಿ ಅಜೇಯ ಆಟವಾಡಿ 181 ರನ್‌ಗಳ ಜೊತೆಯಾಟದೊಂದಿಗೆ ಆರ್  ಸಿಬಿಗೆ ರಾಜಸ್ಥಾನ್ ರಾಯಲ್ಸ್ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯತಂದಿದ್ದರು. ಇದಕ್ಕೂ ಹಿಂದಿನ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಎಬಿ ಡಿವಿಲಿಯರ್ಸ್ ಅಂತಿಮ ಹಂತದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದರು. ಹೀಗಾಗಿ ನಾಳಿನ ಪಂದ್ಯದಲ್ಲಿ ಆರ್ ಸಿಬಿ ಹುಮ್ಮಸ್ಸಿನೊಂದಿಗೆ ಹೋರಾಡಲಿದೆ.

ಸಿಎಸ್‌ಕೆ ಗೆ ಸಂಬಂಧಿಸಿದಂತೆ, ಸುರೇಶ್ ರೈನಾ ಮತ್ತು ಅಂಬಾಟಿ ರಾಯುಡು ಅವರು ನಿರೀಕ್ಷೆಯಂತೆ ರನ್ ಗಳಿಸುತ್ತಿಲ್ಲ. ಇನ್ನು ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ ಮತ್ತು ಫಾಫ್ ಡು ಪ್ಲೆಸಿಸ್ ಇಬ್ಬರೂ ಈ ಹಿಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಎಂಎಸ್ ಧೋನಿ ತಮ್ಮ ಅದ್ಭುತ  ಹೊಡೆತಗಳ ಮೂಲಕ ತಾವಿನ್ನೂ ಫಾರ್ಮ್ ನಲ್ಲಿದ್ದೇನೆ ಎಂದು ಸಾರಿದ್ದಾರೆ. ಉಳಿದಂತೆ ಸ್ಯಾಮ್ ಕರ್ರನ್, ರವೀಂದ್ರ ಜಡೇಜಾ ಮತ್ತು ಡ್ವೇನ್ ಬ್ರಾವೋ ಸಾಕಷ್ಟು ಉತ್ತಮ ಮತ್ತು ಪರಿಣಾಮಕಾರಿ ಬೌಲಿಂಗ್ ಮಾಡುತ್ತಿದ್ದಾರೆ. 

ತಂಡಗಳು ಇಂತಿವೆ
ಚೆನ್ನೈ ಸೂಪರ್ ಕಿಂಗ್ಸ್

ಎಂ.ಎಸ್.ಧೋನಿ (ನಾಯಕ / ವಿಕೆಟ್ ಕೀಪರ್), ಸುರೇಶ್ ರೈನಾ, ನಾರಾಯಣ್ ಜಗದೀಶನ್, ಋತುರಾಜ್ ಗಾಯಕ್ವಾಡ್, ಕೆ.ಎಂ.ಆಸಿಫ್, ಕರಣ್ ಶರ್ಮಾ, ಅಂಬಾಟಿ ರಾಯುಡು, ದೀಪಕ್ ಚಹರ್, ಫಾಫ್ ಡು ಪ್ಲೆಸಿಸ್, ಶಾರ್ದೂಲ್ ಠಾಕೂರ್, ಮಿಚೆಲ್ ಸ್ಯಾಂಟ್ನರ್, ಡ್ವೇಯ್ನ್ ಬ್ರಾವೋ ಕರ್ರನ್, ರವೀಂದ್ರ ಜಡೇಜಾ,  ಇಮ್ರಾನ್ ತಾಹಿರ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಕೆ ಗೌತಮ್, ಚೇತೇಶ್ವರ ಪೂಜಾರ, ಎಂ.ಹರಿಶಂಕರ್ ರೆಡ್ಡಿ, ಕೆ.ಭಗತ್ ವರ್ಮಾ, ಸಿ ಹರಿ ನಿಶಾಂತ್, ಆರ್ ಸಾಯಿ ಕಿಶೋರ್, ಜೇಸನ್ ಬೆಹ್ರೆಂಡೋರ್ಫ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಫಿನ್ ಅಲೆನ್ (ವಿಕೆಟ್ ಕೀಪರ್), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಪವನ್ ದೇಶಪಾಂಡೆ, ವಾಷಿಂಗ್ಟನ್ ಸುಂದರ್, ಡೇನಿಯಲ್ ಸ್ಯಾಮ್ಸ್, ಯುಜ್ವೇಂದ್ರ ಚಾಹಲ್, ಆಡಮ್ ಜಂಪಾ, ಶಹಬಾಜ್ ಅಹ್ಮದ್ , ನವದೀಪ್ ಸೈನಿ, ಕೇನ್ ರಿಚರ್ಡ್ಸನ್, ಹರ್ಷಲ್  ಪಟೇಲ್, ಗ್ಲೆನ್ ಮ್ಯಾಕ್ಸ್ ವೆಲ್, ಸಚಿನ್ ಬೇಬಿ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ಕೈಲ್ ಜಾಮಿಸನ್, ಡೇನಿಯಲ್ ಕ್ರಿಶ್ಚಿಯನ್, ಸುಯಾಶ್ ಪ್ರಭುದೇಸಾಯಿ, ಕೆ.ಎಸ್ ಭಾರತ್. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com