ಆರ್ ಅಶ್ವಿನ್
ಆರ್ ಅಶ್ವಿನ್

ಕುಟುಂಬ ಸದಸ್ಯರಿಗೆ ಕೊರೋನಾ ಸೋಂಕು ಹಿನ್ನಲೆ: ಐಪಿಎಲ್ 2021 ನಿಂದ ವಿರಾಮ ಪಡೆದ ಆರ್ ಅಶ್ವಿನ್

ಕುಟುಂಬ ಸದಸ್ಯರು ಕೋವಿಡ್-19 ಸೋಂಕಿಗೆ ತುತ್ತಾಗಿರುವ ಹಿನ್ನಲೆಯಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿರಾಮ ಪಡೆದಿದ್ದಾರೆ.

ಚೆನ್ನೈ: ಕುಟುಂಬ ಸದಸ್ಯರು ಕೋವಿಡ್-19 ಸೋಂಕಿಗೆ ತುತ್ತಾಗಿರುವ ಹಿನ್ನಲೆಯಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿರಾಮ ಪಡೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವಿನ್, 'ನಾನು ಈ ವರ್ಷದ ಐಪಿಎಲ್‌ ಟೂರ್ನಿಯಲ್ಲಿ ನಾಳೆಯಿಂದ ವಿರಾಮ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಕುಟುಂಬವು ಕೋವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿದೆ ಮತ್ತು ಈ ಕಠಿಣ ಸಮಯದಲ್ಲಿ ನಾನು ಅವರನ್ನು ಬೆಂಬಲಿಸಲು ಬಯಸುತ್ತೇನೆ. ಎಲ್ಲವೂ ಸುಗಮವಾಗಿ  ನಡೆದರೆ ನಾನು ಆಟಕ್ಕೆ ಮರಳಲು ನಿರೀಕ್ಷಿಸುತ್ತೇನೆ ಎಂದು ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಇನ್ನು ಅಶ್ವಿನ್ ಕುಟುಂಬ ಬೇಗ ಚೇತರಿಸಿಕೊಳ್ಳಲಿ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಟ್ವೀಟ್ ಮಾಡಿದ್ದು, 'ಈ ಕಷ್ಟದ ಸಮಯದಲ್ಲಿ ನಿಮಗೆ ನಮ್ಮ ಸಂಪೂರ್ಣ ಬೆಂಬಲ ಸದಾ ಇರುತ್ತದೆ. ದೇವರು ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಎಲ್ಲಾ ಶಕ್ತಿ ನೀಡಲಿ. ಆದಷ್ಟು ಬೇಗ ನಿಮ್ಮ ಕುಟುಂಬ ಚೇತರಿಸಿಕೊಳ್ಳಲಿ ಎಂದು  ಪ್ರಾರ್ಥಿಸುತ್ತೇವೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡ ಟ್ವೀಟ್ ಮಾಡಿದೆ.

Related Stories

No stories found.

Advertisement

X
Kannada Prabha
www.kannadaprabha.com