ಮೊದಲ ಟೆಸ್ಟ್ ಪಂದ್ಯ: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 278 ರನ್ ಗಳಿಗೆ ಸರ್ವಪತನ; 95 ರನ್ ಗಳ ಮುನ್ನಡೆ

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 278 ರನ್ ಗಳಿಗೆ ಆಲೌಟ್ ಆಗಿದೆ.
ಕೆಎಲ್ ರಾಹುಲ್
ಕೆಎಲ್ ರಾಹುಲ್

ನಾಟಿಂಗ್‌ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 278 ರನ್ ಗಳಿಗೆ ಆಲೌಟ್ ಆಗಿದೆ. 

ನಾಟಿಂಗ್‌ಹ್ಯಾಮ್ ನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ತಂಡ 183 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 84 ಮತ್ತು ರವೀಂದ್ರ ಜಡೇಜಾ 56 ರನ್ ಬಾರಿಸಿದ್ದಾರೆ. ಇನ್ನು ರೋಹಿತ್ ಶರ್ಮಾ 36, ರಿಷಬ್ ಪಂತ್ 25, ಜಸ್ ಪ್ರೀತ್ ಬುಮ್ರಾ 28 ರನ್ ಸಿಡಿಸಿದ್ದಾರೆ.

ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಒಲ್ಲಿ ರಾಬಿನ್ಸನ್ 5 ಮತ್ತು ಜೇಮ್ಸ್ ಆ್ಯಂಡರ್ಸನ್‌ 4 ವಿಕೆಟ್ ಪಡೆದಿದ್ದಾರೆ. 

ಮೂರನೇ ದಿನ ಪ್ರಾರಂಭವಾಗುತ್ತಿದ್ದಂತೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com