ಲಾರ್ಡ್ಸ್ ರಾಜನಾಗಲು ಭಾರತ-ಇಂಗ್ಲೆಂಡ್ ಫೈಟ್; ನಾಲ್ವರು ವೇಗಿಗಳನ್ನು ಕಣಕ್ಕಿಳಿಸಲು ಕೊಹ್ಲಿ ಪ್ಲಾನ್!

ಆತಿಥೇಯ ಇಂಗ್ಲೆಂಡ್ ಹಾಗೂ ಪ್ರವಾಸಿ ಭಾರತ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ಗುರುವಾರದಿಂದ ಆರಂಭವಾಗಲಿದೆ. ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಎರಡೂ ತಂಡಗಳು ಯೋಜನೆ ರೂಪಿಸಿಕೊಂಡಿವೆ. 
ಕೊಹ್ಲಿ
ಕೊಹ್ಲಿ

ಲಾರ್ಡ್ಸ್: ಆತಿಥೇಯ ಇಂಗ್ಲೆಂಡ್ ಹಾಗೂ ಪ್ರವಾಸಿ ಭಾರತ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ಗುರುವಾರದಿಂದ ಆರಂಭವಾಗಲಿದೆ. ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಎರಡೂ ತಂಡಗಳು ಯೋಜನೆ ರೂಪಿಸಿಕೊಂಡಿವೆ. 

ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿತ್ತು. ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡವನ್ನು 107 ರನ್ ಗಳಿಗೆ ಆಲೌಟ್ ಮಾಡಿತ್ತು. ಇನ್ನು ಪಂದ್ಯ ಗೆಲ್ಲಲು ಭಾರತಕ್ಕೆ ಕೇವಲ 159 ರನ್ ಗಳ ಅವಶ್ಯಕತೆ ಇತ್ತು. ಆದರೆ ಐದನೇ ದಿನ ಸಂಪೂರ್ಣ ಮಳೆಗೆ ತುತ್ತಾಗಿದ್ದರಿಂದ ಪಂದ್ಯ ಡ್ರಾ ಎಂದು ಘೋಷಿಸಲಾಯಿತು. 

ಅದರಂತೆ ಇದೀಗ ಕೊಹ್ಲಿ ಸಹ ಇದೇ ತಂತ್ರವನ್ನು ಲಾರ್ಡ್ಸ್ ಪಂದ್ಯದಲ್ಲೂ ಬಳಸಲು ಉದ್ದೇಶಿಸಿದ್ದು ಅದಕ್ಕಾಗಿ ನಾಲ್ವರು ವೇಗಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದಾರೆ. 

ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಆತಿಥೇಯ ತಂಡ ಬಲಾಢ್ಯವಾಗಿದ್ದು, ಭಾರತ ಉತ್ತಮ ಪ್ರದರ್ಶನ ನೀಡುವ ಛಲವನ್ನು ಹೊಂದಿದೆ. ಇತಿಹಾಸದ ಪುಟಗಳನ್ನು ತಿರುವಿ ಹಾಕಿದಾಗ ಕ್ರಿಕೆಟ್ ಕಾಶಿ ಎಂದೇ ಖ್ಯಾತಿ ಪಡೆದಿರುವ ಲಾರ್ಡ್ಸ್ ನಲ್ಲಿ ಆತಿಥೇಯ ಇಂಗ್ಲೆಂಡ್ ತಂಡ ಪ್ರಾಬಲ್ಯ ಮೆರೆದಿದೆ. 

ಇಂಗ್ಲೆಂಡ್ ಈ ಅಂಗಳದಲ್ಲಿ ಭಾರತದ ವಿರುದ್ಧ ಒಟ್ಟು 18 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ ಎರಡರಲ್ಲಿ ಜಯ ಸಾಧಿಸಿದ್ದು, 12 ಪಂದ್ಯದಲ್ಲಿ ಸೋಲಿನ ಕಹಿಯನ್ನು ಕಂಡಿದೆ. ಅಲ್ಲದೆ ನಾಲ್ಕು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com