3ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ದಾಖಲೆಯ ಕಳಪೆ ಮೊತ್ತಕ್ಕೆ ಟೀಂ ಇಂಡಿಯಾ ಆಲೌಟ್!

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 78 ರನ್ ಗಳ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. 
ಕೊಹ್ಲಿ-ಜೇಮ್ಸ್ ಆಂಡರ್ಸನ್
ಕೊಹ್ಲಿ-ಜೇಮ್ಸ್ ಆಂಡರ್ಸನ್

ಹೆಡಿಂಗ್ಲೆ: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 78 ರನ್ ಗಳ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. 

ಲೀಡ್ಸ್ ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಜೇಮ್ಸ್ ಆಂಡರ್ಸನ್ ಮತ್ತು ಕ್ರೇಗ್ ಓವರ್ಟನ್ ಇನ್ನಿಲ್ಲದಂತೆ ಕಾಡಿದರು. ಇದರಿಂದಾಗಿ ಟೀಂ ಇಂಡಿಯಾ ಅಲ್ಪಮೊತ್ತಕ್ಕೆ ಆಲೌಟ್ ಆಗಿದೆ. 

ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 19, ಕೆಎಲ್ ರಾಹುಲ್ 0, ಚೇತೇಶ್ವರ ಪೂಜಾರ 1, ವಿರಾಟ್ ಕೊಹ್ಲಿ 7, ಅಜಿಂಕ್ಯ ರಹಾನೆ 18, ರಿಷಬ್ ಪಂತ್ 2, ರವೀಂದ್ರ ಜಡೇಜಾ 4, ಮೊಹಮ್ಮದ್ ಶಮಿ 0, ಇಶಾಂತ್ ಶರ್ಮಾ ಅಜೇಯ 8, ಜಸ್ ಪ್ರೀತ್ ಬುಮ್ರಾ 0, ಸಿರಾಜ್ 3 ರನ್ ಬಾರಿಸಿದ್ದಾರೆ. 

ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್, ಕ್ರೇಗ್ ಓವರ್ಟನ್ ತಲಾ 3 ವಿಕೆಟ್ ಪಡೆದಿದ್ದಾರೆ. ರಾಬಿನ್ಸನ್ ಮತ್ತು ಸ್ಯಾಮ್ ಕುರ್ರೆನ್ ತಲಾ 2 ವಿಕೆಟ್ ಪಡೆದಿದ್ದಾರೆ. 

ಇದಕ್ಕೂ ಮುನ್ನ 2008ರಲ್ಲಿ ಟೀಂ ಇಂಡಿಯಾ ಅಹಮದಾಬಾದ್ ನಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ 76 ರನ್ ಗಳಿಗೆ ಆಲೌಟ್ ಆಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com