ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ: ಐಸಿಸಿ ಟೆಸ್ಟ್ ರ್ಯಾಕಿಂಗ್ ನಲ್ಲಿ ಮತ್ತೆ ಟೀಂ ಇಂಡಿಯಾ ಅಗ್ರ ಸ್ಥಾನಕ್ಕೆ

2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾ 1-0 ಅಂತರದಲ್ಲಿ ಸರಣಿ ಕೈ ವಶ ಮಾಡಿಕೊಂಡಿದ್ದು, ಅಂತೆಯೇ ಕೈ ಜಾರಿದ್ದ ಟೆಸ್ಟ್ ರ್ಯಾಂಕಿಂಗ್ ಅಗ್ರ ಸ್ಥಾನವನ್ನೂ ಕೂಡ ಮತ್ತೆ ತನ್ನದಾಗಿಸಿಕೊಂಡಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ

ಮುಂಬೈ: 2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾ 1-0 ಅಂತರದಲ್ಲಿ ಸರಣಿ ಕೈ ವಶ ಮಾಡಿಕೊಂಡಿದ್ದು, ಅಂತೆಯೇ ಕೈ ಜಾರಿದ್ದ ಟೆಸ್ಟ್ ರ್ಯಾಂಕಿಂಗ್ ಅಗ್ರ ಸ್ಥಾನವನ್ನೂ ಕೂಡ ಮತ್ತೆ ತನ್ನದಾಗಿಸಿಕೊಂಡಿದೆ.

ಹೌದು... ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡವು ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನಕ್ಕೇರಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ 372 ರನ್‌ಗಳ ಅಮೋಘ ಗೆಲುವು ದಾಖಲಿಸಿತು. ಅಂತೆಯೇ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ಮತ್ತೆ ಅಗ್ರಸ್ಥಾನಕ್ಕೇರಿದೆ. 124 ರೇಟಿಂಗ್ಸ್ ಗಳೊಂದಿಗೆ ಟೀಂ ಇಂಡಿಯಾ ಅಗ್ರಸ್ಥಾನಕ್ಕೇರಿದ್ದು, ರ್‍ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ 2ನೇ ಸ್ಥಾನಕ್ಕೆ ಕುಸಿದಿದೆ. 

ಈ ವರ್ಷ ಜೂನ್‌ನಲ್ಲಿ ನಡೆದಿದ್ದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧವೇ ಭಾರತ ಸೋಲನುಭವಿಸಿತ್ತು. ಅಮೋಘ ಆಟವಾಡಿದ್ದ ನ್ಯೂಜಿಲೆಂಡ್ ತಂಡವು ಟೆಸ್ಟ್ ಚಾಂಪಿಯನ್ ಆಗಿದ್ದಲ್ಲದೆ ರ್‍ಯಾಂಕಿಂಗ್‌ನಲ್ಲೂ ಅಗ್ರ ಸ್ಥಾನಕ್ಕೇರಿತ್ತು. ಇದೀಗ ಚಾಂಪಿಯನ್ ತಂಡವನ್ನೇ ಮಣಿಸುವ ಮೂಲಕ ಟೀಮ್ ಇಂಡಿಯಾ ಮತ್ತೆ ಅಗ್ರ ಸ್ಥಾನಕ್ಕೇರಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com