ಆರ್ ಅಶ್ವಿನ್
ಆರ್ ಅಶ್ವಿನ್

2ನೇ ಟೆಸ್ಟ್ ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬೌಲಿಂಗ್, ದಾಖಲೆ ಬರೆದ ಆರ್ ಅಶ್ವಿನ್!

ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಮೂಲಕ ಗಮನ ಸೆಳೆದ ಆರ್ ಅಶ್ವಿನ್ ದಾಖಲೆ ಬರೆದಿದ್ದಾರೆ.

ಮುಂಬೈ: ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಮೂಲಕ ಗಮನ ಸೆಳೆದ ಆರ್ ಅಶ್ವಿನ್ ದಾಖಲೆ ಬರೆದಿದ್ದಾರೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ 2ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ 372ರನ್ ಗಳ ಅಂತರದಲ್ಲಿ ಸೋಲಿಸಿತು. ಈ ಪಂದ್ಯದಲ್ಲಿ ಭಾರತೀಯ ಬೌಲರ್ ಗಳ ಆರ್ಭಟದ ಎದುರು ಮಂಕಾದ ಕಿವೀಸ್ ದಾಂಡಿಗರು ಪಂದ್ಯದ ಎರಡೂ ಇನ್ನಿಂಗ್ಸ್ ನಲ್ಲಿ ಉತ್ತಮ ರನ್ ಗಳಿಸಿರು ವಿಫಲರಾದರು. ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 62 ರನ್ ಗಳಿಗೆ ಆಲೌಟ್ ಆದರೆ, ಎರಡನೇ ಇನ್ನಿಂಗ್ಸ್ ನಲ್ಲಿ 167 ರನ್ ಗಳಿಗೆ ಆಲೌಟ್ ಆಗಿ 372ರನ್ ಗಳ ಅಂತರದಲ್ಲಿ ಸೋಲು ಕಂಡಿತು.

ದಾಖಲೆ ಬರೆದ ಆರ್ ಅಶ್ವಿನ್
ಇನ್ನು ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಅಶ್ವಿನ್ 4 ವಿಕೆಟ್ ಪಡೆದರೆ, 2ನೇ ಇನ್ನಿಂಗ್ಸ್ ನಲ್ಲಿಯೂ ಅಶ್ವಿನ್ 4 ವಿಕೆಟ್ ಕಬಳಿಸಿದರು. ಒಟ್ಟಾರೆ ಈ ಪಂದ್ಯದಲ್ಲಿ ಅಶ್ವಿನ್ 8 ವಿಕೆಟ್ ಪಡೆಯುವ ಮೂಲಕ ಭಾರತದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತದ 2ನೇ ಬೌಲರ್ ಎಂಬ ಕೀರ್ತಿಗೆ ಭಾಜನರಾದರು. ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದು, ಕುಂಬ್ಳೆ ಭಾರತದಲ್ಲಿ 350 ಅಂತಾರಾಷ್ಟ್ರೀಯ ವಿಕೆಟ್ ಪಡೆದಿದ್ದಾರೆ. 2ನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ 300 ವಿಕೆಟ್ ಪಡೆದಿದ್ದಾರೆ. ಅಂತೆಯೇ ಟರ್ಬೋನೇಟರ್ ಹರ್ಭಜನ್ ಸಿಂಗ್ 265 ವಿಕೆಟ್ ಕಬಳಿಸಿದ್ದು, ಕಪಿಲ್ ದೇವ್ 219 ವಿಕೆಟ್ ಕಬಳಿಸಿದ್ದಾರೆ.

ಅತಿ ವೇಗದ 300 ವಿಕೆಟ್
ಅಂತೆಯೇ ಅಶ್ವಿನ್ ಇದೇ ಪಂದ್ಯದಲ್ಲಿ ಅತಿ ವೇಗದ 3000 ಪಡೆದ 2ನೇ ಆಟಗಾರ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ. ಈ ಸಾಧನೆಗಾಗಿ ಅಶ್ವಿನ್ 49 ಪಂದ್ಯಗಳನ್ನು ತೆಗೆದುಕೊಂಡಿದ್ದು, ಇದೇ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 48 ಪಂದ್ಯಗಳಲ್ಲಿ 300 ವಿಕೆಟ್ ಪಡೆದಿದ್ದರು. ಭಾರತದ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ 52 ಪಂದ್ಯಗಳಲ್ಲಿ 300 ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದರು. ಇದೇ ಸಾಧನೆಗಾಗಿ ಆಸ್ಚ್ರೇಲಿಯಾದ ಶೇನ್ ವಾರ್ನ್ 65 ಪಂದ್ಯಗಳನ್ನು ತೆಗೆದುಕೊಂಡಿದ್ದರು. 

Most Tests wickets in India:
350 Anil Kumble
300 Ravi Ashwin*
265 Harbhajan Singh
219 Kapil Dev

Fastest to 300 Tests wickets at home:
48 M Muralitharan
49 Ravi Ashwin*
52 Anil Kumble
65 Shane Warne
71 Jimmy Anderson
76 Stuart Broad
 

Related Stories

No stories found.

Advertisement

X
Kannada Prabha
www.kannadaprabha.com