ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ: ಈ ಸಾಧನೆ ಮಾಡಿದ ಜಗತ್ತಿನ ಮೊದಲ ಆಟಗಾರ ಕೊಹ್ಲಿ!

ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯವನ್ನು ಜಯಿಸುವ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶಿಷ್ಠ ಸಾಧನೆಯೊಂದನ್ನು ಮಾಡಿದ್ದು, ಕ್ರಿಕೆಟ್ ನ ಮೂರೂ ಮಾದರಿಯಲ್ಲಿ ಕನಿಷ್ಠ 50 ಪಂದ್ಯಗಳನ್ನು ಜಯಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಮುಂಬೈ: ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯವನ್ನು ಜಯಿಸುವ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶಿಷ್ಠ ಸಾಧನೆಯೊಂದನ್ನು ಮಾಡಿದ್ದು, ಕ್ರಿಕೆಟ್ ನ ಮೂರೂ ಮಾದರಿಯಲ್ಲಿ ಕನಿಷ್ಠ 50 ಪಂದ್ಯಗಳನ್ನು ಜಯಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಸೋಮವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಂತ್ಯವಾದ ನ್ಯೂಜಿಲೆಂಡ್ ವಿರುದ್ಧದ 2ನೇ ಪಂದ್ಯದಲ್ಲಿ ಟಿಂ ಇಂಡಿಯಾ 372ರನ್ ಗಳ ಭರ್ಜರಿ ಜಯ ಸಾಧಿಸಿತು. ಆ ಮೂಲಕ ಅತೀ ದೊಡ್ಡ ಜಯ ಸಾಧಿಸಿತು. ಅಂತೆಯೇ ಇದು ವಿರಾಟ್ ಕೊಹ್ಲಿಗೆ ಅಟಗಾರನಾಗಿ 50ನೇ ಟೆಸ್ಟ್ ಪಂದ್ಯದ ಗೆಲುವಾಗಿದೆ. ಆ ಮೂಲಕ ಕೊಹ್ಲಿ ಮೂರೂ ಮಾದರಿ ಕ್ರಿಕೆಟ್ ನಲ್ಲಿ 50 ಪಂದ್ಯಗಳನ್ನು ಗೆದ್ದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಅಂತೆಯೇ ಕೊಹ್ಲಿ ನಾಯಕನಾಗಿ 66 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು, ಈ ಪೈಕಿ 39 ಪಂದ್ಯಗಳಲ್ಲಿ ಜಯಗಳಿಸಿ 16ಪಂದ್ಯಗಳಲ್ಲಿ ಭಾರತ ಸೋತಿದೆ. 11 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com