ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು

ಬಿಸಿಸಿಐ ಅಧ್ಯಕ್ಷ ಹಾಗೂ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಕೋವಿಡ್ -19 ಸೋಂಕಿಗೆ ತುತ್ತಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕ್ರಿಕೆಟ್ ಮಂಡಳಿಯ ಮೂಲಗಳು ಮಂಗಳವಾರ ತಿಳಿಸಿವೆ.
ಸೌರವ್ ಗಂಗೂಲಿ
ಸೌರವ್ ಗಂಗೂಲಿ

ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಹಾಗೂ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಕೋವಿಡ್ -19 ಸೋಂಕಿಗೆ ತುತ್ತಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕ್ರಿಕೆಟ್ ಮಂಡಳಿಯ ಮೂಲಗಳು ಮಂಗಳವಾರ ತಿಳಿಸಿವೆ.

ಕೋವಿಡ್ ವೈರಸ್‌ನ ಲಕ್ಷಣಗಳು ಕಾಣಿಸಿಕೊಂಡಿದ್ದ ಬೆನ್ನಲ್ಲೇ ಸೌರವ್ ಗಂಗೂಲಿ ಕೋವಿಡ್‌ 19 ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ಅವರ ವರದಿ ಪಾಸಿಟಿವ್ ಬಂದಿದ್ದು, ಸೌಮ್ಯ ರೋಗಲಕ್ಷಣಗಳೊಂದಿಗೆ ಕೋಲ್ಕತ್ತಾದ ವುಡ್‌ಲ್ಯಾಂಡ್ಸ್ ಆಸ್ಪತ್ರೆಯಲ್ಲಿ (Woodlands hospital) ಗಂಗೂಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ವರ್ಷ ಜನವರಿಯ ನಂತರ ಗಂಗೂಲಿ ಅವರು ಎದೆಯ ಅಸ್ವಸ್ಥತೆಯಿಂದ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದು ಇದು ಮೂರನೇ ಬಾರಿಯಾಗಿದೆ. ಗಂಗೂಲಿ ಅವರು ತಮ್ಮ ಕೋಲ್ಕತ್ತಾದ ಮನೆಯಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ (Heart Attack) ಒಳಗಾಗಿದ್ದರು. ಬಳಿಕ ಅವರು ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು.

20 ದಿನಗಳ ನಂತರ, ಗಂಗೂಲಿಗೆ ಇದೇ ರೀತಿಯ ಎದೆನೋವು ಕಾಣಿಸಿಕೊಂಡಿತ್ತು, ಇದು ಜನವರಿ 28 ರಂದು ಎರಡನೇ ಸುತ್ತಿನ ಆಂಜಿಯೋಪ್ಲ್ಯಾಸ್ಟಿಗೆ ಕಾರಣವಾಗಿತ್ತು. ಈ ವೇಳೆ ಎರಡು ಸ್ಟೆಂಟ್‌ಗಳನ್ನು ಎರಡು ಅಪಧಮನಿಗಳಲ್ಲಿ ಇರಿಸಲಾಗಿತ್ತು. ಗಂಗೂಲಿ ಅವರು ಮಾರ್ಚ್‌ನಲ್ಲಿ ಕೆಲಸವನ್ನು ಪುನರಾರಂಭಿಸಿದ್ದರು ಹಾಗೂ ಕೋವಿಡ್ -19 ವಿರುದ್ಧ ಸೌರವ್ ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿದ್ದಾರೆ.‌

ಗಂಗೂಲಿ ಅವರು ಎರಡು ಬಾರಿ ಲಸಿಕೆಯನ್ನು ಹೊಂದಿದ್ದಾರೆ ಮತ್ತು ಎಲ್ಲಾ ವೃತ್ತಿಪರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ ವ್ಯಾಪಕವಾಗಿ ಪ್ರಯಾಣಿಸಿದ್ದಾರೆ ಎಂದು ತಿಳಿದುಬಂದಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com