ಭಾರತ V/s ಇಂಗ್ಲೆಂಡ್ 2ನೇ ಟೆಸ್ಟ್: ರೋಹಿತ್ ಶರ್ಮಾ ಆಕರ್ಷಕ ಶತಕ, ಬೃಹತ್ ಮೊತ್ತದತ್ತ ಟೀಂ ಇಂಡಿಯಾ

ಚೆನ್ನೈನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಆರಂಭಿಕ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ(161) ಅವರ ಆಕರ್ಷಕ ಶತಕ ಹಾಗೂ ಅಜಿಂಕ್ಯ ರಹಾನೆ(67) ಸಮಯೋಚಿತ ಅರ್ಧಶತಕದ ನೆರವಿನಿಂದ ಭಾರತ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 300 ರನ್‌ ಬಾರಿಸಿದೆ.

Published: 13th February 2021 06:19 PM  |   Last Updated: 13th February 2021 07:13 PM   |  A+A-


rohit1

ರೋಹಿತ್ ಶರ್ಮಾ

Posted By : Lingaraj Badiger
Source : PTI

ಚೆನ್ನೈ: ಚೆನ್ನೈನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಆರಂಭಿಕ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ(161) ಅವರ ಆಕರ್ಷಕ ಶತಕ ಹಾಗೂ ಅಜಿಂಕ್ಯ ರಹಾನೆ(67) ಸಮಯೋಚಿತ ಅರ್ಧಶತಕದ ನೆರವಿನಿಂದ ಭಾರತ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 300 ರನ್‌ ಬಾರಿಸಿದೆ.

ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್‌ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ಆರಂಭಿಕ ಬ್ಯಾಟ್ಸ್‌ಮನ್‌ ಶುಭ್‌ಮನ್‌ ಗಿಲ್‌ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಎರಡನೇ ವಿಕೆಟ್‌ಗೆ ರೋಹಿತ್ ಶರ್ಮಾ ಹಾಗೂ ಚೇತೇಶ್ವರ್‌ ಪೂಜಾರ ಜೋಡಿ 85 ರನ್‌ಗಳ ಜತೆಯಾಟವಾಡುವ ಮೂಲಕ ಆರಂಭಿಕ ಆಘಾತದಿಂದ ತಂಡವನ್ನು ಪಾರು ಮಾಡಿದರು.

ರೋಹಿತ್ ಶರ್ಮಾ ಹಾಗೂ ಉಪನಾಯಕ ಅಜಿಂಕ್ಯ ರಹಾನೆ ನಾಲ್ಕನೇ ವಿಕೆಟ್‌ಗೆ 162 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ರೋಹಿತ್ ಶರ್ಮಾ ಟೆಸ್ಟ್‌ ಕ್ರಿಕೆಟ್‌ ವೃತ್ತಿಜೀವನದ 7ನೇ ಶತಕ ಬಾರಿಸುವ ಮೂಲಕ ಅಬ್ಬರಿಸಿದರೆ, ಅಜಿಂಕ್ಯ ರಹಾನೆ ಹಿಟ್‌ಮ್ಯಾನ್‌ಗೆ ಉತ್ತಮ ಸಾಥ್ ನೀಡಿದರು. ರೋಹಿತ್ ಶರ್ಮಾ 231 ಎಸೆತಗಳನ್ನು ಎದುರಿಸಿ 18 ಬೌಂಡರಿ ಹಾಗೂ 2 ಸಿಕ್ಸರ್‌ ನೆರವಿನಿಂದ 161 ರನ್‌ ಬಾರಿಸಿ ಜಾಕ್‌ ಲೀಚ್‌ಗೆ ವಿಕೆಟ್‌ ಒಪ್ಪಿಸಿದರೆ, ಅಜಿಂಕ್ಯ ರಹಾನೆ 67 ರನ್‌ ಬಾರಿಸಿ ಮೋಯಿನ್ ಅಲಿ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್‌ ಆಗಿ ಪೆವಿಲಿಯನ್ ಸೇರಿದರು.

ಸದ್ಯ ರಿಷಭ್‌ ಪಂತ್ 33 ರನ್‌ ಬಾರಿಸಿ ಅಜೇಯರಾಗುಳಿದಿದ್ದರೆ, ಅಕ್ಷರ್ ಪಟೇಲ್‌ 5 ರನ್‌ ಬಾರಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಈ ಇಬ್ಬರು ಬ್ಯಾಟ್ಸ್‌ಮನ್‌ಗಳ ಜತೆಯಾಟದ ಮೇಲೆ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ ಸ್ಕೋರ್ ನಿರ್ಧಾರವಾಗಲಿದೆ.

ಸಂಕ್ಷಿಪ್ತ ಸ್ಕೋರ್:
ಭಾರತ ಮೊದಲ ಇನ್ನಿಂಗ್ಸ್ 6 ವಿಕೆಟ್ ಗೆ 300
(ರೋಹಿತ್ ಶರ್ಮಾ 161, ಅಜಿಂಕ್ಯ ರಹಾನೆ 67, ಚೇತೇಶ್ವರ್ ಪೂಜಾರ 21, ರಿಷಭ್ ಪಂತ್ 33*, ಲೀಚ್ 78ಕ್ಕೆ 2, ಮೋಯಿನ್ ಅಲಿ 112ಕ್ಕೆ 2)

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp