ಐಪಿಎಲ್ 2021 ಹರಾಜು: 20 ಲಕ್ಷಕ್ಕೆ ಅರ್ಜುನ್ ತೆಂಡೂಲ್ಕರ್ ಬಿಕರಿ: ಯಾವ ತಂಡ ಗೊತ್ತೇ?

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್-2021 ಹರಾಜಿನಲ್ಲಿ 20 ಲಕ್ಷ ರೂಪಾಯಿಗಳಿಗೆ ಬಿಕರಿಯಾಗಿದ್ದಾರೆ. 

Published: 18th February 2021 09:48 PM  |   Last Updated: 18th February 2021 09:49 PM   |  A+A-


Arjun Tendulkar with Sachin Tendulkar

ಸಚಿನ್ ತೆಂಡೂಲ್ಕರ್ ಜತೆ ಅರ್ಜುನ್ ತೆಂಡೂಲ್ಕರ್

Online Desk

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್-2021 ಹರಾಜಿನಲ್ಲಿ 20 ಲಕ್ಷ ರೂಪಾಯಿಗಳಿಗೆ ಬಿಕರಿಯಾಗಿದ್ದಾರೆ. 

ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಅರ್ಜುನ್ ತೆಂಡೂಲ್ಕರ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಅರ್ಜುನ್ ತೆಂಡೂಲ್ಕರ್ ಅವರನ್ನು ತಂಡಕ್ಕೆ ಪಡೆಯುವುದಕ್ಕಾಗಿ ಬಿಡ್ಡಿಂಗ್ ನಲ್ಲಿ ಭಾರಿ ಪೈಪೋಟಿಯ ನಿರೀಕ್ಷೆ ಇತ್ತು ಆದರೆ ಮೂಲ ಬೆಲೆಗೆ ಅರ್ಜುನ್ ತೆಂಡೂಲ್ಕರ್ ಬಿಕರಿಯಾಗಿರುವುದು ಅಚ್ಚರಿ ಮೂಡಿಸಿದೆ. 

ಎಡಗೈ ಮಧ್ಯಮ ವೇಗಿಯಾಗಿರುವ ಅರ್ಜುನ್ ತೆಂಡೂಲ್ಕರ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಕೂಡ ಹೌದು. ಮುಂಬೈ ಪರವಾಗಿ ಮುಸ್ತಾಕ್ ಅಲಿ ಟೂರ್ನಮೆಂಟ್ ನಲ್ಲಿ ಆಡಿರುವ ಅನುಭವವನ್ನೂ ಹೊಂದಿದ್ದಾರೆ. 

ಸಯೀದ್ ಮುಸ್ತಾಕ್ ಅಲಿ ಟೂರ್ನಮೆಂಟ್ ನಲ್ಲಿ ಅರ್ಜುನ್ ತೆಂಡೂಲ್ಕರ್ ಗಮನಾರ್ಹ ಪ್ರದರ್ಶನ ನೀಡಿಲ್ಲವಾದರೂ 73 ನೇ ಪೊಲೀಸ್ ಶೀಲ್ಡ್ ಟೂರ್ನಮೆಂಟ್ ಗಾಗಿ ಎಂಐಜಿ ಕ್ರಿಕೆಟ್ ಕ್ಲಬ್ ನಲ್ಲಿ ಉತ್ತಮ ಫಾರ್ಮ್ ನಲ್ಲಿದ್ದರು. 

2018 ರಲ್ಲಿ ಅರ್ಜುನ್ ತೆಂಡೂಲ್ಕರ್ ಅಂಡರ್ 19 ತಂಡಕ್ಕೆ ಪಾದಾರ್ಪಣೆ ಮಾಡಿದ್ದರು. ಅರ್ಜುನ್ ತೆಂಡೂಲ್ಕರ್ ವಸೀಮ್ ಅಕ್ರಮ್ ಅವರಿಂದ ಬೌಲಿಂಗ್ ಪಟ್ಟುಗಳನ್ನು ಕಲಿತಿದ್ದಾರೆ. 


Stay up to date on all the latest ಕ್ರಿಕೆಟ್ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp