ಕೋವಿಡ್ ಸಾಂಕ್ರಾಮಿಕ ಎಫೆಕ್ಟ್: ಮುಚ್ಚಿದ ಕ್ರೀಡಾಂಗಣದಲ್ಲಿ ಭಾರತ-ಇಂಗ್ಲೆಂಡ್ ಏಕದಿನ ಸರಣಿ, ಪ್ರೇಕ್ಷಕರಿಗಿಲ್ಲ ಅವಕಾಶ

ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಪುಣೆಯಲ್ಲಿ ನಡೆಯಲಿರುವ ಮೂರು ಏಕದಿನ ಪಂದ್ಯಗಳನ್ನು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.

Published: 28th February 2021 12:23 PM  |   Last Updated: 28th February 2021 12:23 PM   |  A+A-


India- England ODI Series

ಭಾರತ-ಇಂಗ್ಲೆಂಡ್ ಏಕದಿನ ಸರಣಿ

Posted By : Srinivasamurthy VN
Source : PTI

ಪುಣೆ: ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಪುಣೆಯಲ್ಲಿ ನಡೆಯಲಿರುವ ಮೂರು ಏಕದಿನ ಪಂದ್ಯಗಳನ್ನು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಹೌದು.. ಪುಣೆಯಲ್ಲಿ ಮಾರ್ಚ್ 23, 26 ಹಾಗೂ 28ರಂದು ನಡೆಯಲಿರುವ ಭಾರತ ಇಂಗ್ಲೆಂಡ್ ನಡುವಿನ ಏಕದಿನ ಪಂದ್ಯಗಳನ್ನು ಪ್ರೇಕ್ಷಕರ ರಹಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಹಾರಾಷ್ಟ್ರ ರಾಜ್ಯ ಕ್ರಿಕೆಟ್ ಸಂಸ್ಥೆ,  ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಪುಣೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಮುಚ್ಚಿದ ಕ್ರೀಡಾಂಗಣದಲ್ಲಿ ಆಯೋಜಿಸಲು  ನಿರ್ಧರಿಸಲವಾಗಿದೆ ಎಂದು ಹೇಳಿದೆ.

ಈ ಬಗ್ಗೆ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, 'ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣವು ಹೆಚ್ಚುತ್ತಿರುವುದರ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ಪ್ರೇಕ್ಷಕರು ಇಲ್ಲದೆ ಏಕದಿನ ಸರಣಿಗೆ ಅನುಮತಿ ನೀಡಲಾಗುವುದು ಹೇಳಿದರೆ.

ಮೂಲಗಳ ಪ್ರಕಾರ, 'ಭಾರತ-ಇಂಗ್ಲೆಂಡ್ ಏಕದಿನ ಸರಣಿ ಆಯೋಜನೆ ಕುರಿತಂತೆ ಎಂಸಿಎ ಅಧ್ಯಕ್ಷ ಕಾಕಟ್ಕರ್, ಆಡಳಿತ ಮಂಡಳಿ ಮುಖ್ಯಸ್ಥ ಮಿಲಿಂದ್ ನಾರ್ವೆಕರ್ ಅವರು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮತ್ತು ಪ್ರವಾಸೋದ್ಯಮ ಹಾಗೂ ಪರಿಸರ ಸಚಿವ ಆದಿತ್ಯಜೀ ಠಾಕ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆಟಗಾರರು ಅಧಿಕಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಅಗತ್ಯ ಮುನ್ನಚ್ಚೆರಿಕೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚನೆ ನೀಡಿದ್ದಾರೆ. ಹೀಗಾಗಿ ಮುಚ್ಚಿದ ಕ್ರೀಡಾಂಗಣದಲ್ಲಿ ಏಕದಿನ ಸರಣಿ ಆಯೋಜನೆಯಾಗಲಿದೆ ಎನ್ನಲಾಗಿದೆ. 

Stay up to date on all the latest ಕ್ರಿಕೆಟ್ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp