ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯ ಸ್ಥಿರ, ಚಿಕಿತ್ಸೆಗೆ ಸ್ಪಂದನೆ: ಜಯ್ ಶಾ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಎದೆನೋವಿನ ಸಮಸ್ಯೆಯಿಂದಾಗಿ  48 ವರ್ಷದ ಸೌರವ್ ಗಂಗೂಲಿ ಇಲ್ಲಿನ ವುಡ್ ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Published: 02nd January 2021 05:07 PM  |   Last Updated: 02nd January 2021 05:50 PM   |  A+A-


BCCI_president_Sourav_Ganguly_R_with_Board_secretary_Jay_Shah1

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ(ಬಲಕ್ಕೆ) ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (ಎಡಕ್ಕೆ)

Posted By : Nagaraja AB
Source : The New Indian Express

ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಎದೆನೋವಿನ ಸಮಸ್ಯೆಯಿಂದಾಗಿ  48 ವರ್ಷದ ಸೌರವ್ ಗಂಗೂಲಿ ಇಲ್ಲಿನ ವುಡ್ ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೌರವ್ ಗಂಗೂಲಿ ಅವರ ಕುಟುಂಬ ವರ್ಗದವರ ಜೊತೆಗೆ ಮಾತನಾಡಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಜಯ್ ಶಾ ಟ್ವೀಟ್ ಮಾಡಿದ್ದಾರೆ.

 

ಸೌರವ್ ಗಂಗೂಲಿ ಬೇಗನೆ ಗುಣಮುಖರಾಗಲಿ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡಾ ಟ್ವೀಟ್ ಮಾಡಿದ್ದಾರೆ. ಬೆಳಗ್ಗೆ ಲಘು ಹೃದಯಾಘಾತಕ್ಕೊಳಗಾಗಿದ್ದ ಟೀಂ ಇಂಡಿಯಾ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯ ಇದೀಗ ಸ್ಥಿರವಾಗಿದ್ದು, ಅವರು ಬೇಗನೆ ಗುಣಮುಖರಾಗಲಿ ಎಂದು ಹಾರೈಸುವುದಾಗಿ ಐಸಿಸಿ ಟ್ವೀಟ್ ಮಾಡಿದೆ.

ಎದೆನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿರುವ ಸೌರವ್ ಗಂಗೂಲಿಗೆ ಅಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ. 


Stay up to date on all the latest ಕ್ರಿಕೆಟ್ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp