ಸೌರವ್ ಗಂಗೂಲಿಗೆ ಇಂತಹ ಸಮಸ್ಯೆಯಿದೆ ಎಂದು ಊಹಿಸಿರಲಿಲ್ಲ: ಮಮತಾ ಬ್ಯಾನರ್ಜಿ

ಲಘು ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಅವರ ಆರೋಗ್ಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಾಮರ್ಶಿಸಿದ್ದಾರೆ.

Published: 02nd January 2021 08:59 PM  |   Last Updated: 02nd January 2021 08:59 PM   |  A+A-


Ganguly-Mamata Banerjee

ಗಂಗೂಲಿ-ಮಮತಾ ಬ್ಯಾನರ್ಜಿ

Posted By : Vishwanath S
Source : UNI

ಕೋಲ್ಕತಾ: ಲಘು ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಅವರ ಆರೋಗ್ಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಾಮರ್ಶಿಸಿದ್ದಾರೆ.

ದಾದಾ ಅನಾರೋಗ್ಯಕ್ಕೊಳಗಾದ ವಿಷಯ ತಿಳಿದ ಕೂಡಲೇ ಟ್ವೀಟರ್ ನಲ್ಲಿ ಕಳವಳ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಗಂಗೂಲಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದರು. ನಂತರ ಅವರು ನೇರವಾಗಿ ಗಂಗೂಲಿ ಚಿಕಿತ್ಸೆ ಪಡೆಯುತ್ತಿರುವ ವುಡ್ ಲ್ಯಾಂಡ್ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಗಂಗೂಲಿ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ನಂತರ, ಸೌರವ್ ಗಂಗೂಲಿ ಈಗ ಚೆನ್ನಾಗಿದ್ದಾರೆ. ಅವರೊಂದಿಗೆ ತಾವು ಮಾತನಾಡಿದ್ದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಸೌರವ್ ಗಂಗೂಲಿ ಇಂತಹ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ತಾವು ಊಹಿಸಿರಲಿಲ್ಲ, ಆಂಜಿಯೋಪ್ಲ್ಯಾಸ್ಟಿ ನಡೆಸಿದ ವೈದ್ಯರಿಗೆ ಮುಖ್ಯಮಂತ್ರಿ ಧನ್ಯವಾದಗಳು ಸಲ್ಲಿಸಿದ್ದಾರೆ. ಮತ್ತೊಂದುಕಡೆ, ಗಂಗೂಲಿಗೆ  ಆಂಜಿಯೋಪ್ಲ್ಯಾಸ್ಟಿ ನಡೆಸಿರುವುದಾಗಿ ವೈದ್ಯರು ತಿಳಿಸಿದ್ದು, ಅವರ ಹೃದಯದ ಎರಡು ರಕ್ತನಾಳಗಳು ಬ್ಲಾಕೇಜ್ ಆಗಿದ್ದವು. 

ಪ್ರಸ್ತುತ, ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಇನ್ನೂ 24 ಗಂಟೆಗಳ ಕಾಲ ವೈದ್ಯರ  ಮೇಲ್ವಿಚಾರಣೆಯಲ್ಲಿರಲಿದ್ದಾರೆ. ಗಂಗೂಲಿ ಅವರರನ್ನು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ಕ್ರಿಕೆಟ್ ಜಗತ್ತು ಗೊಂದಲದಲ್ಲಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಹಲವು ಪ್ರಮುಖ ವ್ಯಕ್ತಿಗಳು, ಅಭಿಮಾನಿಗಳು ಹಾಗೂ ಕ್ರಿಕೆಟಿಗರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.


Stay up to date on all the latest ಕ್ರಿಕೆಟ್ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp