ಟೀಂ ಇಂಡಿಯಾಗೆ ಮತ್ತೊಂದು ಆಘಾತ: ಟೆಸ್ಟ್ ಸರಣಿಯಿಂದ ಕೆ.ಎಲ್. ರಾಹುಲ್ ಹೊರಕ್ಕೆ

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಾಟ ಆಡುತ್ತಿರುವ ಟೀಂ ಇಂಡಿಯಾಗೆ ಗಾಯದ ಮೇಲೆ ಗಾಯವಾಗುತ್ತಲೇ ಇದೆ. ಸುದೀರ್ಘ ಕಾಲದ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಕೆ.ಎಲ್.ರಾಹುಲ್ ಅವರು ಸರಣಿಯಿಂದಲೇ ಹೊರಬಿದ್ದಿದ್ದಾರೆ. 

Published: 05th January 2021 10:26 AM  |   Last Updated: 05th January 2021 12:31 PM   |  A+A-


KL Rahul

ಕೆ.ಎಲ್.ರಾಹುಲ್

Posted By : Manjula VN
Source : ANI

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಾಟ ಆಡುತ್ತಿರುವ ಟೀಂ ಇಂಡಿಯಾಗೆ ಗಾಯದ ಮೇಲೆ ಗಾಯವಾಗುತ್ತಲೇ ಇದೆ. ಸುದೀರ್ಘ ಕಾಲದ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಕೆ.ಎಲ್.ರಾಹುಲ್ ಅವರು ಸರಣಿಯಿಂದಲೇ ಹೊರಬಿದ್ದಿದ್ದಾರೆ. 

ಅಭ್ಯಾಸ ನಡೆಸುತ್ತಿರುವ ವೇಳೆ ರಾಹುಲ್ ಅವರು ಗಾಯಗೊಂಡಿದ್ದು, ಎಡ ಮಣಿಕಟ್ಟು ಉಳಿಕಿದ ಕಾರಣ ರಾಹುಲ್ ಸರಣಿಯಿಂದಲೇ ಹೊರ ಬೀಳಬೇಕಾಗಿದೆ. ರಾಹುಲ್ ಭಾರತದ ವಿಮಾನ ಏರಲಿದ್ದು, ಬೆಂಗಳೂರಿನ ಎನ್'ಸಿಎನಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. 

ಸರಣಿಯಿಂದ ಈಗಾಗಲೇ ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್ ಹೊರಬಿದ್ದಿದ್ದು, ಇದೀಗ ರಾಹುಲ್ ಅವರೂ ಹೊರಬಿದ್ದಿರುವುದರಿಂದ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದೆ. 

ಕೆಎಸ್ ರಾಹುಲ್ ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಪಡೆಯದೇ ಇದ್ದರೂ ಮೂರನೇ ಪಂದ್ಯದಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದರು. 

ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಘಾತಕಾರಿ ರೀತಿಯಲ್ಲಿ ಸೋಲು ಕಂಡಿದ್ದ ಟೀಮ್ ಇಂಡಿಯಾ, ಮೆಲ್ಬರ್ನ್ ಅಂಗಳದಲ್ಲಿ ನಡೆದ ಎರಡನೇ ಪಂದ್ಯವನ್ನು ಅಜಿಂಕ್ಯ ರಹಾನೆ ನೇತೃತ್ವದಲ್ಲಿ ಭರ್ಜರಿಯಾಗಿ ಗೆದ್ದುಕೊಂಡಿತ್ತು. ಸರಣಿಯಲ್ಲಿ ಇದೀಗ ಎರಡು ಪಂದ್ಯ ಬಾಕಿಯಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.


Stay up to date on all the latest ಕ್ರಿಕೆಟ್ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp