27ನೇ ಟೆಸ್ಟ್ ಶತಕ; ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಟೀವನ್ ಸ್ಮಿತ್ 

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸುವ ಮೂಲಕ ಆಸಿಸ್ ಬ್ಯಾಟ್ಸ್ ಮನ್ ಸ್ಟೀವೆನ್ ಸ್ಮಿತ್ ಭಾರತದ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.

Published: 08th January 2021 01:07 PM  |   Last Updated: 08th January 2021 01:07 PM   |  A+A-


Steve Smith

ಸ್ಟೀವನ್ ಸ್ಮಿತ್

Online Desk

ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸುವ ಮೂಲಕ ಆಸಿಸ್ ಬ್ಯಾಟ್ಸ್ ಮನ್ ಸ್ಟೀವೆನ್ ಸ್ಮಿತ್ ಭಾರತದ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.

ಭಾರತದ ವಿರುದ್ಧ ಸ್ಮಿತ್ ಸಿಡಿಸಿದ ಇಂದಿನ ಶತಕ ಅವರ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದ 27ನೇ ಶತಕವಾಗಿದೆ. ಈ ಇನ್ನಿಂಗ್ಸ್ ನಲ್ಲಿ ಸ್ಮಿತ್ 226 ಎಸೆತಗಳಲ್ಲಿ 16 ಬೌಂಡರಿಗಳ ನೆರವಿನಿಂದ 131 ರನ್ ಗಳಿಸಿದರು. ಈ ಮೂಲಕ ಆಸೀಸ್ ತಂಡವನ್ನು 338 ರನ್‌ಗಳ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾದರು. 

ಇನ್ನು ಈ ಶತಕದ ಮೂಲಕ ಸ್ಮಿತ್ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದು, ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ ನಲ್ಲಿ 27 ಶತಕಗಳನ್ನು ಸಿಡಿಸಿದ್ದಾರೆ. ಅಂತೆಯೇ ಆಸ್ಟ್ರೇಲಿಯಾದ ಮಾಜಿ ದಿಗ್ಗಜ ಸರ್ ಡಾನ್ ಬ್ರಾಡ್ಮನ್ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗದಲ್ಲಿ 27 ಶತಕಗಳನ್ನು ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಎಂಬ ಗೌರವಕ್ಕೂ ಸ್ಟೀವನ್ ಸ್ಮಿತ್ ಭಾಜನವಾಗಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಜೊತೆಗೆ ಭಾರತದ ಸಚಿನ್ ತೆಂಡೂಲ್ಕರ್ ಅವರನ್ನೇ ಹಿಂದಿಕ್ಕಿದ್ದಾರೆ. ಡಾನ್ ಬ್ರಾಡ್ಮನ್ 70 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ ಸ್ಮಿತ್ 136ನೇ ಇನ್ನಿಂಗ್ಸ್‌ನಲ್ಲಿ ಮೈಲುಗಲ್ಲು ತಲುಪಿದರು. ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್ ರನ್ ಬೇಟೆಯಲ್ಲೂ ವಿರಾಟ್ ಕೊಹ್ಲಿ ಅವರನ್ನು ಸ್ಟೀವನ್ ಸ್ಮಿತ್ ಮೀರಿ ನಿಂತಿದ್ದಾರೆ. 87 ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 7318 ರನ್ ಗಳಿಸಿದ್ದರು. ಸ್ಮಿತ್ 75 ಟೆಸ್ಟ್‌ಗಳಲ್ಲೇ ಈ ಸಾಧನೆ ಮೀರಿಸಿದ್ದಾರೆ. ಸ್ಟೀವನ್ ಸ್ಮಿತ್ ಕೊನೆಯದಾಗಿ 2019ನೇ ಇಸವಿಯಲ್ಲಿ ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ 211 ರನ್ ಗಳಿಸಿದ್ದರು. ಇದೀಗ ಮಗದೊಂದು ಶತಕದೊಂದಿಗೆ ದೀರ್ಘ ಸಮಯದ ರನ್ ಬರವನ್ನು ನೀಗಿಸಿದ್ದಾರೆ.

ಭಾರತ ವಿರುದ್ಧ ಗರಿಷ್ಠ ಶತಕ ಸಾಧನೆ
ಅಂತೆಯೇ ಸ್ಮಿತ್ ಗೆ ಇದು ಭಾರತದ ವಿರುದ್ಧ 8ನೇ ಶತಕ ಸಾಧನೆಯಾಗಿದ್ದು, ಭಾರತ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮಾಜಿ ದಿಗ್ಗಜರಾದ ಗ್ಯಾರಿ ಸೋಬರ್ಸ್, ವಿವಿಯನ್ ರಿಚರ್ಡ್ಸ್ ಮತ್ತು ರಿಕಿ ಪಾಂಟಿಂಗ್ ದಾಖಲೆಯನ್ನು ಸರಿಗಟ್ಟಿದ್ದಾರೆ. 
 


Stay up to date on all the latest ಕ್ರಿಕೆಟ್ news
Poll
Vidhana Saudha

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬೊಮ್ಮಾಯಿ ಸರ್ಕಾರ ವಿಫಲವಾಗಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp