ಸಿಡ್ನಿ ಮೈದಾನದಲ್ಲಿ ಆಸ್ಟ್ರೇಲಿಯಾ ಅಭಿಮಾನಿಗಳಿಂದ ಬುಮ್ರಾ, ಸಿರಾಜ್‌ಗೆ ಜನಾಂಗೀಯ ನಿಂದನೆ, ದೂರು ದಾಖಲು!

ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲಿ ಆಸೀಸ್ ಅಭಿಮಾನಿಗಳು ಟೀಂ ಇಂಡಿಯಾದ ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ರನ್ನು ಜನಾಂಗೀಯ ನಿಂದನೆ ಮಾಡಿದ್ದಾರೆ. 

Published: 09th January 2021 05:44 PM  |   Last Updated: 09th January 2021 05:44 PM   |  A+A-


Bumrah-Siraj

ಬುಮ್ರಾ-ಸಿರಾಜ್

Posted By : Vishwanath S
Source : Online Desk

ಸಿಡ್ನಿ: ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲಿ ಆಸೀಸ್ ಅಭಿಮಾನಿಗಳು ಟೀಂ ಇಂಡಿಯಾದ ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ರನ್ನು ಜನಾಂಗೀಯ ನಿಂದನೆ ಮಾಡಿದ್ದಾರೆ. 

ಮೂರನೇ ದಿನದ ಅಂತಿಮ ಘಟ್ಟದಲ್ಲಿ ಮೊಹಮ್ಮದ್ ಸಿರಾಜ್ ಮತ್ತು ಬುಮ್ರಾ ಬೌಂಡರಿ ಗೆರೆಯಲ್ಲಿ ನಿಂತು ಫೀಲ್ಡಿಂಗ್ ಮಾಡುತ್ತಿದ್ದಾಗ ಆಸೀಸ್ ಅಭಿಮಾನಿಗಳು ಭಾರತೀಯ ಆಟಗಾರರನ್ನು ನಿಂದಿಸಿದ್ದಾರೆ. ಕುಡಿದು ನಸೆಯಲ್ಲಿದ್ದ ಅಭಿಮಾನಿಗಳು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. 

ಹಂಗಾಮಿ ನಾಯಕ ಅಜಿಂಕ್ಯ ರಹಾನೆ ಮತ್ತು ಹಿರಿಯ ಸ್ಪಿನ್ನರ್ ಆರ್ ಅಶ್ವಿನ್ ಅವರು ಈ ವಿಚಾರವನ್ನು ಮೈದಾನದ ಅಂಪೈರ್ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ದೂರು ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp